ಧೆಂಕನಲ್​:ಮಹಿಳೆಯ ಜತೆ ಸರ್ಕಾರಿ ಕಚೇರಿಯಲ್ಲಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದ ಒಡಿಶಾದ ಗಾಡಸಿಲಾ ಪಟ್ಟಣದ ಉಸ್ತುವಾರಿ, ಧೆಂಕನಲ್​ ಜಿಲ್ಲೆಯ ರೆವಿನ್ಯೂ ಇನ್ಸ್​ಪೆಕ್ಟರ್​ನನ್ನು ಬಂಧಿಸಲಾಗಿದೆ.
ತಮ್ಮ ಕಚೇರಿಯಲ್ಲಿ ಮಹಿಳೆಯೊಬ್ಬರ ಜತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಅವರನ್ನು ಅಮಾನತಿನಲ್ಲಿ ಇಡಲಾಗಿದೆ.
ಬಂಧಿತ ಅಧಿಕಾರಿಯನ್ನು ರಂಜನ್​ ಪಾಣಿಗ್ರಹಿ ಎಂದು ಗುರುತಿಸಲಾಗಿದೆ. ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಏಪ್ರಿಲ್​ 11ರಂದು ಧೆಂಕನಕಲ್​ ಜಿಲ್ಲಾಧಿಕಾರಿ ಭೂಮೇಶ್​ ಚಂದ್ರ ಬೆಹೆರಾ ಅವರು ಆರೋಪಿ ಪಾಣಿಗ್ರಹಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶ ನೀಡಿದ್ದರು.
ಇದನ್ನೂ ಓದಿರಿ:ನೀನು ಸತ್ತ ಮೇಲೆ ಮಗ ನನ್ನ ಜತೆ ಇರಬೇಕು ಅಂತಿದ್ದಾರೆ ವಿಚ್ಛೇದಿತ ಪತಿ- ಹೀಗೆ ಕಂಡೀಷನ್​ ಹಾಕ್ಬೋದಾ?
ಅಲ್ಲದೆ, ವಿಡಿಯೋ ವೈರಲ್​ ಆದ ಎರಡು ದಿನಗಳ ಬಳಿಕ ವಿಡಿಯೋದಲ್ಲಿದ್ದ ಮಹಿಳೆಯು ಸಹ ಪಾಣಿಗ್ರಹಿ ವಿರುದ್ಧ ದೂರು ದಾಖಲಿಸಿದ್ದಾಳು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ರೆವಿನ್ಯೂ ಇನ್ಸ್​ಪೆಕ್ಟರ್​ ಆಗಿದ್ದ ಪಾಣಿಗ್ರಹಿ ಅವರನ್ನು ಕೆಲವು ತಿಂಗಳ ಹಿಂದೆ ಗಾಡಸಿಲಾ ಸರ್ಕಲ್​ ಕಚೇರಿಯ ಉಸ್ತುವರಿಯಾಗಿ ನೇಮಕ ಮಾಡಲಾಗಿತ್ತು. ವೈರಲ್​ ಆಗಿರುವ ಅವರ ವಿಡಿಯೋದಲ್ಲಿ, ಪಾಣಿಗ್ರಹಿ ಅವರ ಕಚೇರಿಯಲ್ಲಿ ಖಾಲಿ ಮದ್ಯದ ಬಾಟೆಲ್​ಗಳಿದ್ದು, ಹೊರಗಿನವರು ಸಹ ಕಚೇರಿಯಲ್ಲಿ ಮಲಗಿರುವ ದೃಶ್ಯವಿದೆ. ಅದರಲ್ಲೂ ಪಾಣಿಗ್ರಹಿ, ಮಹಿಳೆಯೊಬ್ಬಳ ಜತೆ ಕಚೇರಿಯಲ್ಲಿಯೇ ಸಂಧಾನ ಸ್ಥಿತಿಯಲ್ಲಿರುವ ದೃಶ್ಯವು ಸೆರೆಯಾಗಿದೆ.
ವೈರಲ್​ ವಿಡಿಯೋ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ಪಾಣಿಗ್ರಹಿ ಅವರನ್ನು 6 ತಿಂಗಳ ಕಾಲ ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಒಡಪಾದ ತಹಸೀಲ್ದಾರ್​ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು. ತನಿಖಾ ವರದಿ ಬಂದ ಬಳಿಕ ವರದಿ ಆಧರಿಸಿ ಮತ್ತೊಮ್ಮೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದರು. ಅದರಂತಯೇ ಆರೋಪಿಯನ್ನು ಇದೀಗ ಬಂಧಿಸಲಾಗಿದೆ.(ಏಜೆನ್ಸೀಸ್​)
ಈ 3 ಕ್ರಮ ಅನುಸರಿಸಿದ್ರೆ ಕರೊನಾ ವಿರುದ್ಧ ಪರಿಣಾಮಕಾರಿ ಹೋರಾಟ ಸಾಧ್ಯ: ಏಮ್ಸ್​ ಮುಖ್ಯಸ್ಥರ ಸಲಹೆ
VIDEO| ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಡೈನೋಸಾರ್ ರೀತಿಯ ಜೀವಿ: ಬೆಚ್ಚಿಬೀಳಿಸೋ ವಿಡಿಯೋ ಇದು! ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
