ಗಜಪತಿ:ಒಡಿಶಾದ ಪರಲಖೆಮುಂಡಿಯ ಅರಣ್ಯ ಸಹಾಯಕ ಸಂರಕ್ಷಕ (ಎಸಿಎಫ್​) ಅಧಿಕಾರಿ ಸೌಮ್ಯ ರಂಜನ್​ ಮೊಹಪಾತ್ರ ನಿಗೂಢ ಸಾವು ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆಯುತ್ತಿದ್ದು, ಒಡಿಶಾದ ಅಪರಾಧ ವಿಭಾಗದ ಪೊಲೀಸರು ಸೌಮ್ಯ ರಂಜನ್​ ಪತ್ನಿ ಬಿದ್ಯಾಭಾರತಿ ಪಾಂಡಾಳನ್ನು ಪಾಲಿಗ್ರಾಫ್​ (ಸುಳ್ಳು ಪತ್ತೆ) ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ.
ಬಿದ್ಯಾಭಾರತಿಯನ್ನು ಸುಳ್ಳು ಪತ್ತೆ ಪರೀಕ್ಷೆ ಗುರಿಯಾಗಿಸಲು ಒಡಿಶಾ ರಾಜಧಾನಿ ಭುವನೇಶ್ವರಕ್ಕೆ ಕರೆತರುವ ಸಾಧ್ಯತೆ ಇದೆ. ಈ ಪ್ರಕರಣದ ಪ್ರಮುಖ ಆರೋಪಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್​ಒ) ಸಂಗ್ರಾಮ್​ ಕೇಸರಿ ಬೆಹೆರಾ ಮತ್ತು ಅಡುಗೆ ಕೆಲಸಗಾರ ಮನ್ಮಥ್​ ಕುಂಭ ಎಂಬುವವರಿಗೆ ಶನಿವಾರ (ಸೆ. 18) ಪಾಲಿಗ್ರಾಫ್​ ಟೆಸ್ಟ್​ ಮಾಡಲಾಗಿದೆ.
ಡಿಎಫ್​ಒಗೆ ಸುಮಾರು 3 ಗಂಟೆಗಳ ಕಾಲ ಭುವನೇಶ್ವರದ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ. ಎಸಿಎಫ್​ ಸೌಮ್ಯ ರಂಜನ್​ ಸಾವಿಗೆ ಕಾರಣ ತಿಳಿಯಲು ಟೆಸ್ಟ್​ ವೇಳೆ ಡಿಎಫ್​ಒಗೆ ಸುಮಾರು 100 ಪ್ರಶ್ನೆಗಳನ್ನು ಕೇಳಲಾಗಿದೆ.
ಸೌಮ್ಯ ರಂಜನ್​ ಕುಟುಂಬ ಬಿದ್ಯಾಭಾರತಿಯ ಹೆಸರನ್ನು ಉಲ್ಲೇಖಿಸಿದ್ದು, ಮಗನ ಸಾವಿನ ಹಿಂದೆ ಪತ್ನಿ ಬಿದ್ಯಾಭಾರತಿ ಕೈವಾಡ ಇದೆ. ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಬಿದ್ಯಾಭಾರತಿಗು ಮತ್ತು ಡಿಎಫ್​ಒ ಸಂಗ್ರಾಮ್​ ಕೇಸರಿಗೂ ಅನೈತಿಕ ಸಂಬಂಧ ಇತ್ತೆಂದು ಸೌಮ್ಯ ರಂಜನ್​ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೀಗಾಗಿ ಪೊಲೀಸ್​ ಎಫ್​ಐಆರ್​ನಲ್ಲಿ ಬಿದ್ಯಾಭಾರತಿ ಹೆಸರನ್ನು ಸಹ ಸೇರಿಸಲಾಗಿದೆ.
ಈ ಪ್ರಕರಣದಲ್ಲಿ ಸೌಮ್ಯ ರಂಜನ್​ ಪತ್ನಿ ಬಿದ್ಯಾಭಾರತಿ, ಗಜಪತಿ ಡಿಎಫ್​ಒ ಸಂಗ್ರಾಮ್​ ಕೇಸರಿ ಮತ್ತು ಅಡುಗೆಭಟ್ಟ ಸೇರಿದಂತೆ ಒಟ್ಟು 6 ಮಂದಿಯನ್ನು ಈಗಾಗಲೇ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದುವರೆಗೂ 25 ಮಂದಿ ಹೇಳಿಕೆಯನ್ನು ದಾಖಲಿಸಲಾಗಿದೆ. ಆದರೆ, ಇದುವರೆಗೂ ಸೌಮ್ಯ ರಂಜನ್​ ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಇನ್ನು ವಿಚಾರಣೆ ನಡುವೆಯೇ ಪರಲಖೆಮುಂಡಿಯ ಪೊಲೀಸ್​ ಗಜಪತಿ ಡಿಎಫ್​ಒ ಸಂಗ್ರಾಮ್​ ಕೇಸರಿಗೆ ಈ ಪ್ರಕರಣದಲ್ಲಿ ಕ್ಲೀನ್​ಚಿಟ್​ ನೀಡಿದ್ದಾರೆ. ಕರೆ ವಿವರಣೆಯನ್ನು ವಿಶ್ಲೇಷಿಸಿದರೆ ಈ ಪ್ರಕರಣಕ್ಕೂಮ ಡಿಎಫ್​ಒಗೂ ಸಂಬಂಧ ಇಲ್ಲ ಎಂಬುದು ತಿಳಿದುಬರುತ್ತದೆ ಎಂದು ಗಜಪತಿ ಎಸ್​ಪಿ ತಪಾನ್​ ಕುಮಾರ್​ ಪಾಟ್ನಾಯಕ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೂ, ಪೊಲೀಸರು ಕ್ಲೀನ್​ ಚಿಟ್​ ನೀಡಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಸೌಮ್ಯ ರಂಜನ್​ ಕುಟುಂಬ ಬಲವಾದ ಆರೋಪ ಮಾಡಿದ್ದು, ಡಿಎಫ್​ಒ ಮತ್ತು ಬಿದ್ಯಾಭಾರತಿ ನಡುವೆ ಅನೈತಿಕ ಸಂಬಂಧ ಇತ್ತು. ಇದರಿಂದಲೇ ಮನೆಯಲ್ಲಿ ಆಗಾಗ ಜಗಳಗಳು ನಡೆಯುತ್ತಿತ್ತು. ಮಗನನ್ನು ಕೊಲೆ ಮಾಡಲಾಗಿದೆ ಎಂದು ದೂರು ನೀಡಿದ್ದು, ಎಫ್​ಐಆರ್​ನಲ್ಲಿ ಡಿಎಫ್​ಒ ಮತ್ತು ಬಿದ್ಯಾಭಾರತಿಯನ್ನು ಪ್ರಮುಖ ಆರೋಪಿಗಳನ್ನಾಗಿ ಪರಿಗಣಿಸಲಾಗಿದೆ.
ಅಂದಹಾಗೆ ಎಸಿಎಫ್​ ಸೌಮ್ಯ ರಂಜನ್ ಅವರು​ ಜುಲೈ 11ರಂದು ಪರಲಖೆಮುಂಡಿಯ ತಮ್ಮ ಕ್ವಾಟ್ರಸ್​ನಲ್ಲಿ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಕೂಡ ಆಸ್ಪತ್ರೆಗೆ ದಾಖಲಿಸಿದ ದಿನದ ಬೆನ್ನಲ್ಲೇ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು.(ಏಜೆನ್ಸೀಸ್​)
ಕಿವೀಸ್ ಕೈ ಕೊಟ್ರು​ ನಾನಿಲ್ಲವೇ? ವಿಶ್ವದೆದುರು ಬೆತ್ತಲಾಗಿರೋ ಪಾಕ್​ಗೆ ವಿಂಡೀಸ್​ ದೈತ್ಯ ಕ್ರಿಸ್​ ಗೇಲ್​ ಬೆಂಬಲ

ತಿರುಪತಿ ಭೇಟಿ ವೇಳೆ ಪತ್ರಕರ್ತರ ಮೇಲೆ ಸಮಂತಾ ಗರಂ: ನಿಮಗೆ ಬುದ್ಧಿ ಇಲ್ವಾ ಎಂದ ಸೌತ್​ ಬ್ಯೂಟಿ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಉಗಾಂಡ ಪ್ರಜೆಗಳ ಪುಂಡಾಟ: ಅಂಗಾಂಗ ತೋರಿಸಿ ವಿಕೃತಿ ಮೆರೆದ ಮಹಿಳೆಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + one =
Remember me
