ನವದೆಹಲಿ:ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ, ಆಯಿಲ್​ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಇಂದು (ಮಾ.26) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಮತ್ತೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ಮಾ. 24 ಒಂದು ದಿನ ಮಾತ್ರ ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಮಾರ್ಚ್​ 22 ಮತ್ತು ಮಾ.23ರಂದು ಬೆಲೆ ಏರಿಕೆಯಾಗಿತ್ತು. ಒಂದು ದಿನದ ಬಳಿಕ ಮಾರ್ಚ್​ 25ರಂದು ಬೆಲೆ ಏರಿಕೆಯಾಗಿತ್ತು, ಇದೀಗ ಮತ್ತೆ ಬೆಲೆ ಏರಿಕೆಯಾಗಿದ್ದು, ಸಾಮಾನ್ಯ ಜನರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ಎದುರಾಗುತ್ತಿದೆ.
ಒಂದೆಡೆ ಯೂಕ್ರೇನ್​-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ ದರ ಮತ್ತೊಮ್ಮೆ ಏರಿಕೆಯಾಗಿರುವುದು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಇನ್ನಷ್ಟು ತಟ್ಟಲಿದೆ. ಸಾಮಾನ್ಯ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಕಳೆದ ಐದು ದಿನಗಳಲ್ಲಿ 3 ರೂಪಾಯಿ 10 ಪೈಸೆಯಷ್ಟು ಇಂಧನ ದರ ಏರಿಕೆಯಾಗಿದೆ.
ಇಂದು ಬೆಳಗ್ಗೆ 6 ಗಂಟೆಯಿಂದಲೇ ದರ ಏರಿಕೆ ಪರಿಷ್ಕರಣೆಯಾಗಿದ್ದು, ಇಂದಿನ ಇಂಧನ ದರ ಈ ಕೆಳಕಂಡಂತಿದೆ
ಬೆಂಗಳೂರುಪೆಟ್ರೋಲ್​: ಪ್ರತಿ ಲೀಟರ್​ಗೆ 103.93 ರೂಪಾಯಿಡೀಸೆಲ್​: ಪ್ರತಿ ಲೀಟರ್​ಗೆ 84.14 ರೂಪಾಯಿ
ದೆಹಲಿಪೆಟ್ರೋಲ್​: 98.61 ರೂಪಾಯಿಡೀಸೆಲ್​: 89.87
ಮುಂಬೈಪೆಟ್ರೋಲ್​: 113.35 ರೂ.ಡೀಸೆಲ್​: 97.55
ಚೆನ್ನೈಪೆಟ್ರೋಲ್​: 104.43 ರೂ.ಡೀಸೆಲ್​: 94.47
ಕೊಲ್ಕತಪೆಟ್ರೋಲ್​: 108.01 ರೂ.ಡೀಸೆಲ್​: 93.01
ಹೈದರಾಬಾದ್​ಪೆಟ್ರೋಲ್​: 111.80 ರೂ.ಡೀಸೆಲ್​: 98.10
ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರುಗತಿಯಲ್ಲಿದೆ. ಐದು ದಿನದಲ್ಲಿ ನಾಲ್ಕನೇ ಬಾರಿ ಏರಿಕೆಯಾಗಿದೆ. ಪಂಚ ರಾಜ್ಯ ಚುನಾವಣೆ ಬೆನ್ನಲ್ಲೇ ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.
ಸ್ಥಳೀಯ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಅಂತರಾಷ್ಟ್ರೀಯ ಬೆಲೆಗಳಿಗೆ ಸಂಬಂಧಿಸಿವೆ. ಇದು ಕಚ್ಚಾ ತೈಲ ಬೆಲೆಗಳ ಮೇಲೆ ನಿರ್ಧಾರವಾಗಿರುತ್ತದೆ. ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.(ಏಜೆನ್ಸೀಸ್​)
ಪಾವಗಡದ ಪಳವಳ್ಳಿ ಕಟ್ಟೆ ಬಸ್ ಅಪಘಾತ ಪ್ರಕರಣ: ಮೃತರ ಸಂಖ್ಯೆ 7ಕ್ಕೇ ಏರಿಕೆ, ಪಿಯು ವಿದ್ಯಾರ್ಥಿ ಸಾವು

ಇಂದು ಐಪಿಎಲ್ 15ನೇ ಆವೃತ್ತಿ ಉದ್ಘಾಟನಾ ಪಂದ್ಯ ; ಶುಭಾರಂಭಕ್ಕೆ ಸಿಎಸ್‌ಕೆ – ಕೆಕೆಆರ್ ಕಾತರ

RRR ಚಿತ್ರ ವೀಕ್ಷಿಸುತ್ತಿದ್ದ ಅಭಿಮಾನಿ ಸಾವು: ಸಿನಿಮಾ ಮಧ್ಯದಲ್ಲೇ ನಡೆದ ಘಟನೆ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್​!

ಆಕಾಂಕ್ಷಿಗಳಿಗೆ ಸಿಇಟಿ ಸವಾಲು: ಸಿದ್ಧತೆಗೆ ಸಾಕಾಗುತ್ತಿಲ್ಲ ಸಮಯ; ಒತ್ತಡದಲ್ಲಿ ಅಭ್ಯರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
