ತಿರುವನಂತಪುರಂ:ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮನೆಗಳನ್ನು ಗುರಿಯಾಗಿರಿಸಿ ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (ಸೆ.22) ದಾಳಿ ಮಾಡಿ, 100ಕ್ಕೂ ಹೆಚ್ಚು ಪಿಎಫ್​ಐ ಸದಸ್ಯರನ್ನು ಬಂಧಿಸಿರುವುದನ್ನು ಖಂಡಿಸಿ ಕೇರಳದಲ್ಲಿಂದು ಪಿಎಫ್​ಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ.
ಪ್ರತಿಭಟನೆ ಹಿಂಸೆಗೆ ತಿರುಗಿದ ಬೆನ್ನಲ್ಲೇ ಕೇರಳ ಹೈಕೋರ್ಟ್​, ಪಿಎಫ್​ಐ ನಾಯಕರ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸದೆ. ನಮ್ಮ ಅನುಮತಿ ಇಲ್ಲದೆ ಯಾರೊಬ್ಬರು ಬಂದ್​ಗೆ ಕರೆ ನೀಡುವಂತಿಲ್ಲ ಎಂದು ಕೋರ್ಟ್​ ಖಡಕ್​ ಆಗಿ ಹೇಳಿದೆ.
ಪಿಎಫ್​ಐ ಕರೆಕೊಟ್ಟಿರುವ ಒಂದು ದಿನದ ಬಂದ್​ ವೇಳೆ ರಾಜ್ಯಾದ್ಯಂತ ಹಲವಾರು ವಿಧ್ವಂಸಕ ಮತ್ತು ಹಿಂಸಾಚಾರದ ಘಟನೆಗಳು ವರದಿಯಾಗಿವೆ. ತಿರುವನಂತಪುರಂ, ಕೊಲ್ಲಂ, ಕೋಯಿಕ್ಕೋಡ್, ವಯನಾಡು ಮತ್ತು ಆಲಪ್ಪುಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿವೆ. ಆಲುವಾ ಸಮೀಪದ ಕಂಪನಿಪಾಡಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ (ಕೆಎಸ್‌ಆರ್‌ಟಿಸಿ) ಅನ್ನು ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ.
ಕಣ್ಣೂರಿನ ನಾರಾಯಣಪಾರಾದಲ್ಲಿ ಬೆಳಿಗ್ಗೆ ಪತ್ರಿಕೆಗಳನ್ನು ವಿತರಿಸಲು ಸಾಗಿಸುತ್ತಿದ್ದ ವಾಹನದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ, ಆಲಪ್ಪುಳದಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳು​, ಟ್ಯಾಂಕರ್​ ಲಾರಿ ಮತ್ತು ಇತರೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ವಾಹನಗಳಿಗೆ ಹಾನಿಯಾಗಿವೆ. ಕೋಯಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಲ್ಲಿ 15 ವರ್ಷದ ಬಾಲಕಿ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪಿಟಿಐ ವರದಿ ಮಾಡಿದೆ.
ಪೊಲೀಸರಿಗೆ ಗಾಯಕೊಲ್ಲಂನಲ್ಲಿ ಆ್ಯಂಟೋನಿ ಮತ್ತು ನಿಖಿಲ್​ ಹೆಸರಿನ ಇಬ್ಬರು ಸಿವಿಲ್​ ಪೊಲೀಸರ ಮೇಲೆ ಪಿಎಫ್​ಐ ಕಾರ್ಯಕರ್ತರು ಹಲ್ಲೆ ಮಾಡಿದ ಪರಿಣಾಮ, ಪೇದೆಗಳಿಬ್ಬರೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್‌ನಲ್ಲಿ ಬಂದ ಇಬ್ಬರು, ಜನರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಿದ್ದಾಗ, ಅದನ್ನು ತಡೆಯಲು ಬಂದು ಪೊಲೀಸರ ಮೇಲೆಯೇ ಹಲ್ಲೆ ನಡೆದಿದೆ. ಬೈಕ್ ನಂಬರ್ ಗುರುತಿಸಲಾಗಿದ್ದು, ಆರೋಪಿಯನ್ನು ಶೀಘ್ರವೇ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೇರಳದಲ್ಲಿ ಹೆಚ್ಚಿದ ಭದ್ರತೆಪಿಎಫ್​ಐ ಬಂದ್​ ಹಿಂಸೆಗೆ ತಿರುಗಿದ ಬೆನ್ನಲ್ಲೇ ಕೇರಳ ಪೊಲೀಸರು ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಪೊಲೀಸ್​ ಇಲಾಖೆ ನಿರ್ದೇಶನಗಳನ್ನು ನೀಡಿದೆ.
ನಿನ್ನೆ ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಇತರ ರಾಜ್ಯಗಳ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿತು. ವಿವಿಧ ಪ್ರಕರಣಗಳ ಅಡಿಯಲ್ಲಿ 100 ಕ್ಕೂ ಹೆಚ್ಚು ಪಿಎಫ್​ಐ ಸದಸ್ಯರು ಮತ್ತು ಅವರ ಸಂಪರ್ಕದಲ್ಲಿರುವವರನ್ನು ಇಡಿ, ಎನ್​ಐಎ ಮತ್ತು ಆಯಾ ರಾಜ್ಯದ ಪೊಲೀಸರು ಬಂಧಿಸಿದೆ. ಇದುವರೆಗಿನ ಅತಿ ದೊಡ್ಡ ತನಿಖಾ ದಾಳಿ ಇದಾಗಿದೆ. ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹ, ತರಬೇತಿ ಶಿಬಿರಗಳ ಆಯೋಜನೆ, ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರ ಮನವೊಲಿಸುವುದು ಮತ್ತು ಉಗ್ರರೊಂದಿಗೆ ಸಂಪರ್ಕ ಸೇರಿದಂತೆ ಇನ್ನಿತರ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಆರೋಪದ ಮೇಲೆ ದಾಳಿ ನಡೆಯಿತು. ದಾಳಿಯ ಬೆನ್ನಲ್ಲೇ ಪಿಎಫ್​ಐ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಟೆಕ್ಕಿ ಮನೆಯಲ್ಲಿ 20 ಲಕ್ಷ ಮೌಲ್ಯದ ಚಿನ್ನ ಕದ್ದು ಅಡಗಿದ್ದ ಕಳ್ಳ… ಪತ್ನಿ ಮೇಲಿನ ಪ್ರೀತಿಗೆ ವಾಪಸ್​ ಬಂದು ಪೊಲೀಸರಿಗೆ ಶರಣಾದ

ಸಿನಿಮೀಯ ಶೈಲಿಯಲ್ಲಿ ಖಾಸಗಿ ಬಸ್​ ಅಡ್ಡಗಟ್ಟಿದ ಶಾಲಾ ಪ್ರಾಂಶುಪಾಲರಿಗೆ ನೆಟ್ಟಿಗರ ಬಹುಪರಾಕ್!​

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳನ್ನು ಮಂಚಕ್ಕೆ ಕರೆದ ಪೊಲೀಸ್ ಹೆಡ್​ ಕಾನ್ಸ್​ಟೇಬಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 12 =
Remember me
