ನವದೆಹಲಿ:ಚಂಡೀಗಢ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹೆಸರಿಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿರುವುದಾಗಿ ಪ್ರಧಾನಿ ಮೋದಿ ಅವರು ತಿಳಿಸಿದರು.
ಇಂದು ರೆಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​ನ 93ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ಸೆಪ್ಟೆಂಬರ್ 28 ರಂದು ಭಗತ್ ಸಿಂಗ್ ಅವರ ಜನ್ಮದಿನ. ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವವಾಗಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
It has been decided to rename Chandigarh airport after Shaheed Bhagat Singh: PM Narendra Modi, on radio show 'Mann Ki Baat'pic.twitter.com/IG3bZ5WQ6O
— ANI (@ANI)September 25, 2022

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಗಾಂಧೀಜಿ ಮತ್ತು ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನವನ್ನು ಸ್ಮರಿಸಿದರು. ಅಕ್ಟೋಬರ್ 2 ರಂದು ಗಾಂಧೀಜಿ ಅವರ ಜನ್ಮದಿನದ ಸಂದರ್ಭದಲ್ಲಿ, ನಾವು ವೋಕಲ್​ ಫಾರ್​ ಲೋಕಲ್​ (ಸ್ಥಳೀಯತೆಗಾಗಿ ಧ್ವನಿ) ಅನ್ನು ತೀವ್ರಗೊಳಿಸುವ ಪ್ರತಿಜ್ಞೆ ತೆಗೆದುಕೊಳ್ಳಬೇಕಾಗಿದೆ. ನಮ್ಮ ಸ್ಥಳೀಯ ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳನ್ನು ನಮ್ಮ ಹಬ್ಬದ ಸಂತೋಷದಲ್ಲಿ ಸೇರಿಸೇಬೇಕೆಂದು ಕರೆ ನೀಡಿದರು.
ಸೆಪ್ಟೆಂಬರ್ 25 ರಂದು ಭಾರತವು ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಶ್ರೇಷ್ಠ ಪುತ್ರನಿಗೆ ಗೌರವ ಸಲ್ಲಿಸಿದರು. ಉಪಾಧ್ಯಾಯ ಅವರ “ಸಮಗ್ರ ಮಾನವತಾವಾದ” ವನ್ನು ಶ್ಲಾಘಿಸಿದರು.(ಏಜೆನ್ಸೀಸ್​)
ಸ್ಪರ್ಧೆಯಲ್ಲಿ ಭಾಗವಹಿಸಿ ಚೀತಾಗಳಿಗೆ ಸೂಕ್ತ ಹೆಸರು ಸೂಚಿಸುವವರಿಗೆ ಬಂಪರ್​ ಆಫರ್ ಕೊಟ್ಟ ಪ್ರಧಾನಿ ಮೋದಿ

10 ಸಾವಿರಕ್ಕೆ ನನ್ನನ್ನು ನಾನು ಮಾರಿಕೊಳ್ಳಲ್ಲ: ಅಂಕಿತಾಳ ವಾಟ್ಸ್​ಆ್ಯಪ್​ ಚಾಟ್​ನಲ್ಲಿ ಸ್ಫೋಟಕ ಮಾಹಿತಿ

ಬಿಜೆಪಿ ನಾಯಕನ ಪುತ್ರನಿಂದ ಯುವತಿ ಕೊಲೆ: ಮರಣೋತ್ತರ ವರದಿಯಲ್ಲಿ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
