ನವದೆಹಲಿ:ಮಹಾಮಾರಿ ಕರೊನಾ ವೈರಸ್ ಮೂರನೇ ಅಲೆ ಭೀತಿಯ​ ನಡುವೆಯೂ ರಾಷ್ಟ್ರವು ಇಂದು 75ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ಈ ಅಮೃತ ಘಳಿಗೆಯಲ್ಲಿ ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣಕ್ಕೂ ಮುನ್ನ ರಾಜ್​ಘಾಟ್​ಗೆ ತೆರಳಿದ ಪ್ರಧಾನಿ ಮೋದಿ, ಗಾಂಧಿ ಸಮಾಧಿಗೆ ಗೌರವ ಸಮರ್ಪಣೆ ಮಾಡಿದರು. ಕೆಂಪುಕೋಟೆಯಲ್ಲಿ ಕೆಲವೇ ಗಣ್ಯರ ಸಮ್ಮುಖದಲ್ಲಿ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ.
Delhi | PM Narendra Modi pays tribute to Mahatma Gandhi at Rajghat on the 75th Independence Day
(Photo source: DD News)pic.twitter.com/n9sybFSV1f
— ANI (@ANI)August 15, 2021

ರಾಜ್​ಘಾಟ್​ನಿಂದ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಮೂರು ರಕ್ಷಣಾ ಪಡೆ ಹಾಗೂ ಪೊಲೀಸ್​ ತಂಡದಿಂದ ಮೋದಿ ಅವರಿಗೆ ಗೌರವ ಸಲ್ಲಿಸಲಾಯಿತು.
Delhi | Prime Minister Narendra Modi inspects the guard of honour at Red Fortpic.twitter.com/Y2tMYsFQ62
— ANI (@ANI)August 15, 2021

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇದು ಅವರ ಸತತ ಎಂಟನೇ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಪ್ರಧಾನಿ ಮೋದಿ ಭಾಷಣವನ್ನು ರಾಷ್ಟ್ರೀಯ ಸಾರ್ವಜನಿಕ ಪ್ರಸಾರಕ ದೂರದರ್ಶನ ನೇರ ಪ್ರಸಾರ ಮಾಡುತ್ತಿದೆ. ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಕೂಡ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಹಾಗೂ ಅದರ ಟ್ವಿಟರ್ ಹ್ಯಾಂಡಲ್ ನಲ್ಲಿ ಭಾಷಣವನ್ನು ನೇರ ಪ್ರಸಾರ ಮಾಡುತ್ತಿದೆ. ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕೃತ ಯೂಟ್ಯೂಬ್ ಚಾನೆಲ್ ಕೂಡ ಪ್ರಧಾನಿ ಭಾಷಣವನ್ನು ಪ್ರಸಾರ ಮಾಡುತ್ತಿದೆ.
Sign in to your account
Please enter an answer in digits:13 + 6 =
Remember me
