ದುಬೈ:ಪ್ರಖ್ಯಾತ ವ್ಲಾಗರ್​ ಮತ್ತು ಮಲಯಾಳಂ ಆಲ್ಬಂ ಸ್ಟಾರ್​ ರಿಫಾ ಮೆಹ್ನು (21) ಅವರು ದುಬೈನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕೇರಳದ ಕೊಯಿಕ್ಕೋಡ್​ ನಗರದ ಬಲುಸ್ಸೆರಿ ಮೂಲದ ರಿಫಾ, ದುಬೈನ ಜಫ್ಫಿಲಿಯಾದಲ್ಲಿರುವ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪತಿ ಮೆಹ್ನೋವ್​ ಮತ್ತು ಮಗಳ ಜತೆ ದುಬೈನಲ್ಲಿ ನೆಲೆಸಿದ್ದರು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಆಕೆಯ ಸಂಬಂಧಿಕರು ಮತ್ತು ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ.
ರಿಫಾ ಅವರು ಆಹಾರ ಮತ್ತು ಫ್ಯಾಶನ್​ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದರು. ಕೇರಳದಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದಿದ್ದರು. ಸದಾ ಸಾಮಾಜಿಕ ಜಾಲತಾಣದಲ್ಲಿ ರಿಫಾ ಬಿಜಿಯಾಗಿರುತ್ತಿದ್ದರು. ಸಾವಿಗೂ ಕೆಲವು ಕ್ಷಣಗಳ ಹಿಂದೆಯೂ ಆಕೆ ಜಾಲತಾಣದಲ್ಲಿ ಸಕ್ರೀಯರಾಗಿದ್ದರು. ರಿಫಾ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ.
ಯುಎಇಯ ಜನಪ್ರಿಯ ಹೋಟೆಲ್‌ನಲ್ಲಿ ರಿಫಾ ಮತ್ತು ಅವರ ಪತಿ ಆಹಾರವನ್ನು ತಿನ್ನುತ್ತಿರುವ ಅವರ ಕೊನೆಯ ವಿಡಿಯೋಗೆ ಸಿಕ್ಕಾಪಟ್ಟೆ ಕಾಮೆಂಟ್‌ಗಳು ಹರಿದು ಬರುತ್ತಿವೆ. ರಿಫಾ ಕಳೆದುಕೊಂಡ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯ ನಂತರ ಸಾವಿಗೆ ಕಾರಣ ಏನೆಂದು ತಿಳಿದುಬರಲಿದೆ.(ಏಜೆನ್ಸೀಸ್​)
A post shared by 👑𝐌𝐞𝐡𝐧𝐮 𝐂𝐡𝐚𝐧𝐧𝐞𝐥 (@mehnu_family_919)

ನೀರಿನ ಬಾಟಲಿಗೆ 5 ರೂ. ಹೆಚ್ಚುವರಿ ಬಿಲ್​: ಕೋರ್ಟ್​ ವಿಧಿಸಿದ ದಂಡದ ಮೊತ್ತ ನೋಡಿ ಹೋಟೆಲ್ ಮಾಲೀಕ ಶಾಕ್​!​

ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟುವುದಿಲ್ಲ: ನೋವು ತೋಡಿಕೊಂಡ ನಟಿ ರಶ್ಮಿಕಾ ಮಂದಣ್ಣ

ದಕ್ಷಿಣ ಕನ್ನಡ ಎಸ್​ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್​ಐ ಕುಸಿದು ಬಿದ್ದು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
