ನವದೆಹಲಿ:ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ “ದಿ ಕಾಶ್ಮಿರ ಫೈಲ್ಸ್​” ಸಿನಿಮಾ ಭರ್ಜರಿ ಪ್ರದರ್ಶನದೊಂದಿಗೆ ವ್ಯಾಪಕ ಚರ್ಚೆಗೂ ಕಾರಣವಾಗಿದೆ. 1990 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಕುರಿತ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದೆ. ಮಾರ್ಚ್​ 11ರಂದು ಬಿಡುಗಡೆಯಾದ ಈ ಸಿನಿಮಾವನ್ನು ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸಿನಿಮಾವನ್ನು ಟೀಕೆ ಮಾಡಿದ್ದಾರೆ. ಈ ಸಾಲಿಗೆ ನಟ ಹಾಗೂ ರಾಜಕಾರಣಿ ಪ್ರಕಾಶ್​ ರಾಜ್​ ಕೂಡ ಸೇರಿಕೊಂಡಿದ್ದಾರೆ.
ಪ್ರಕಾಶ್​ ರಾಜ್​ ಅವರು ಮಾಡಿರುವ ಟ್ವೀಟ್​ ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಪ್ರಕಾಶ್​ ರಾಜ್​ ಮಾಡಿರುವ ಟ್ವೀಟ್​ ಏನು ಅಂದರೆ, ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್​ ಆಸ್ಕಿಂಗ್​ ಎಂದು ಟ್ವೀಟ್​ ಮಾಡಿದ್ದಾರೆ. ಟ್ವೀಟ್​ ಜತೆಗೆ ಕಾಶ್ಮೀರ ಫೈಲ್ಸ್​ ಚಿತ್ರ ವೀಕ್ಷಣೆ ಬಳಿಕ ಚಿತ್ರಮಂದಿರಲ್ಲಿ ವ್ಯಕ್ತಿಯೊರ್ವ ವೀಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ದೃಶ್ಯವಿದೆ. ಇದೀಗ ಪ್ರಕಾಶ್​ ರಾಜ್​ ಟ್ವೀಟ್​ ಹಾಟ್​ ಟಾಪಿಕ್​ ಆಗಿದೆ.
#kashmirifilesthis propaganda film … is it healing wounds or sowing seeds of hatred and inflicting wounds#Justaskingpic.twitter.com/tYmkekpZzA
— Prakash Raj (@prakashraaj)March 18, 2022

ಸಾಕಷ್ಟು ಪರ-ವಿರೋಧದ ನಡುವೆಯೂ ಕಾಶ್ಮೀರ್​ ಫೈಲ್ಸ್​ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ಗುಜರಾತ್, ಹರಿಯಾಣ, ಮಧ್ಯಪ್ರದೇಶದ ರಾಜ್ಯಗಳಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪ್ರಧಾನಿ ಮೋದಿ ಅವರೂ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ, ದೇಶದೆಲ್ಲಡೆ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವ ”ದಿ ಕಾಶ್ಮೀರ್​ ಫೈಲ್ಸ್​” ಸಿನಿಮಾವನ್ನು ಕರ್ನಾಟಕದ ಸಚಿವರು, ಶಾಸಕರು ಕೂಡ ವೀಕ್ಷಣೆ ಮಾಡಿದ್ದಾರೆ.(ಏಜೆನ್ಸೀಸ್​)
ಸಮಂತಾಗೆ ಏನಾಯ್ತು? ಯಾಕಿಂಗೆ ಆಡ್ತಿದ್ದಾರೆ? ಹೀಗೆ ಮುಂದುವರಿದ್ರೆ ಗೌರವಕ್ಕೆ ಧಕ್ಕೆ ಖಂಡಿತ ಅಂತಿದ್ದಾರೆ ಇವರು…

ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ

ತಕ್ಷಣ ಡಾನ್ಸ್​ ಕ್ಲಾಸ್​ಗೆ ಬಾ, ನನ್ನನ್ನು ಪ್ರೀತಿಸು, ಇಲ್ಲಾಂದ್ರೆ ಸಾಯಿಸುವೆ… ಅಪ್ರಾಪ್ತೆಗೆ ಅನ್ಯಕೋಮಿನ ಯುವಕನಿಂದ ಬೆದರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
