ಚಂಡಿಗಢ:ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಪಂಜಾಬ್​ ಮುಖ್ಯಮಂತ್ರಿ ಚರಂಜೀತ್​ ಸಿಂಗ್​ ಚನ್ನಿ ಅವರ ಸೋದರಳಿಯ ಭೂಪಿಂದರ್​ ಸಿಂಗ್​ ಹನಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (ಫೆ.03) ತಡರಾತ್ರಿ ಬಂಧಿಸಿದೆ.
ಭೂಪಿಂದರ್​ ಸಿಂಗ್​ರನ್ನು ಇಡಿ ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಭೂಪಿಂದರ್​ಗೆ ಸಂಬಂಧಿಸಿದ ಸ್ಥಳದಲ್ಲಿ ಸುಮಾರು 7.9 ಕೋಟಿ ರೂ. ಮತ್ತು ಅವರ ಆಪ್ತ ಸಂದೀಪ್​ ಕುಮಾರ್​ ಮನೆಯಲ್ಲಿ 2 ಕೋಟಿ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ.
ವಶಪಡಿಸಿಕೊಳ್ಳಲಾದ ಹಣಕ್ಕೆ ಸಂಬಂಧಿಸಿದಂತೆ ಭೂಪಿಂದರ್​ ಸಿಂಗ್​ನ ಇಬ್ಬರು ಆಪ್ತರನ್ನು ವಿಚಾರಣೆ ನಡೆಸಲಾಗುತ್ತಿದೆ. ಮೂವರನ್ನು ಸಹ ಅಕ್ರಮ ಮರಳು ಗಣಿಗಾರಿಕೆ ಸುತ್ತ ನಡೆದಿರುವ ಅಕ್ರಮ ಹಣ ವರ್ಗಾವಣೆ ಸಂಬಂಧ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಕ್ರಮ ಮರಳು ದಂಧೆ ನಡೆಸಲು ಶೆಲ್ ಕಂಪನಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಶಂಕಿಸಲಾಗಿದೆ.
ಭೂಪಿಂದರ್ ಸಿಂಗ್, ಕುದ್ರತ್‌ದೀಪ್ ಸಿಂಗ್ ಮತ್ತು ಸಂದೀಪ್ ಕುಮಾರ್ ಪ್ರೊವೈಡರ್ಸ್ ಓವರ್‌ಸೀಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯ ನಿರ್ದೇಶಕರು ಎಂದು ಜಾರಿ ನಿರ್ದೇಶನಾಲಯದ ತನಿಖೆಗಳು ಬಹಿರಂಗಪಡಿಸಿವೆ. ಈ ಕಂಪನಿಯನ್ನು 2018ರ ಅಕ್ಟೋಬರ್​ನಲ್ಲಿ ಸ್ಥಾಪಿಸಲಾಗಿದೆ.
ಕಂಪನಿ ಸ್ಥಾಪನೆಯಾದ 6 ತಿಂಗಳಲ್ಲಿ ಆರೋಪಿ ಕುದ್ರತ್‌ದೀಪ್ ಸಿಂಗ್ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಪ್ರಕರಣ ದಾಖಲಾಗಿದೆ. ಮರಳು ಗಣಿ ಗುತ್ತಿಗೆ ಪಡೆಯುವಲ್ಲಿ ಕಪ್ಪುಹಣ ಹೂಡಿಕೆ ಮಾಡಲಾಗಿದೆ ಎಂದು ಇಡಿ ಶಂಕೆ ವ್ಯಕ್ತಪಡಿಸಿದೆ. ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಜನರಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಿದೆ ಎಂದು ಈ ಹಿಂದೆ ಪಂಜಾಬ್‌ನ ಪ್ರತಿಪಕ್ಷಗಳು ಆರೋಪಿಸಿದ್ದವು.
2021ರ ಡಿಸೆಂಬರ್​ನಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ)ವು ಸಿಎಂ ಚನ್ನಿ ಅವರ ಸ್ವಂತ ಕ್ಷೇತ್ರವಾದ ಚಮಕೌರ್ ಸಾಹಿಬ್‌ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಭಿವೃದ್ಧಿ ಹೊಂದುತ್ತಿದೆ ಎಂದು ಆರೋಪಿಸಿತ್ತು.(ಏಜೆನ್ಸೀಸ್​)
ತಮ್ಮ ಮೊದಲ ಮನೆ ಮಾರಾಟ ಮಾಡಿದ ಅಮಿತಾಭ್​ ಬಚ್ಚನ್​ಗೆ ಸಿಕ್ಕ ಹಣದ ಮೊತ್ತ ಕೇಳಿದ್ರೆ ದಂಗಾಗ್ತಿರಾ..!

ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ದುರಂತ ಸಾವು: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿ: ತುಮಕೂರಲ್ಲಿ ನಡೆದ ಅಮಾನವೀಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
