ನವದೆಹಲಿ:ಹೃದಯಾಘಾತದಿಂದ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿರುವ ಸ್ಟ್ಯಾಂಡ್-ಅಪ್​ ಕಾಮಿಡಿಯನ್​ ಹಾಗೂ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಅವರು ಈವರೆಗೂ ಚಿಕಿತ್ಸೆಗೆ ಸ್ಪಂದಿಸಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆ. 10ರಂದು ದೆಹಲಿಯ ನಿವಾಸದಲ್ಲಿ ವರ್ಕೌಟ್​ ಮಾಡುವಾಗ ರಾಜು ಶ್ರೀವಾತ್ಸವ್​ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆದರೆ, ಈವರೆಗೂ ಅವರು ಯಾವುದೇ ಚಿಕಿತ್ಸೆಗೂ ಸ್ಪಂಧಿಸುತ್ತಿಲ್ಲ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಾದ ದಿನದಿಂದ ರಾಜು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರ ಇತ್ತೀಚಿನ ಆರೋಗ್ಯ ಸ್ಥಿತಿಯ ಮಾಹಿತಿ ಪ್ರಕಾರ, ರಾಜು ಅವರ ಮೆದುಳು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.
ಏಮ್ಸ್​ ಆಸ್ಪತ್ರೆಯ ಮೂಲಗಳ ಪ್ರಕಾರ ರಾಜು ಅವರಿಗೆ ಈಗಲೂ ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಯಾವುದಕ್ಕೂ ಸ್ಪಂದಿಸುತ್ತಿಲ್ಲ. ರಾಜು ಅವರ ಬಿಸಿನೆಸ್​ ಮ್ಯಾನೇಜರ್​ ಸಹ ಮಾತನಾಡಿದ್ದು, ರಾಜು ಆರೋಗ್ಯದಲ್ಲಿ ಹೇಳಿಕೊಳ್ಳುವಷ್ಟು ಸುಧಾರಣೆ ಕಂಡಿಲ್ಲ. ಅವರಿಗೆ ಇನ್ನು ಪ್ರಜ್ಞೆ ಬಂದಿಲ್ಲ. ಮೆದುಳು ಕೆಲಸ ಮಾಡುತ್ತಿಲ್ಲ. ವೈದ್ಯರು ಕಾದು ನೋಡೋಣ ಎಂದು ಹೇಳುತ್ತಿದ್ದಾರೆ. ಅವರ ಶೀಘ್ರ ಚೇತರಿಕೆಗೆ ಎಲ್ಲರು ಪ್ರಾರ್ಥಿಸೋಣ ಎಂದಿದ್ದಾರೆ.
ರಾಜು ಅವರ ಕುಟುಂಬವು ಸಹ ರಾಜು ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ಅವರ ಚೇತರಿಕೆಗೆ ನಾವು ಪ್ರಾರ್ಥಿಸುತ್ತಿದ್ದೇವೆ. ನಮಗೆ ಬೆಂಬಲವಾಗಿ ನಿಂತಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ಕಡೆಗಣಿಸಿ, ರಾಜು ಅವರಿಗಾಗಿ ಪ್ರಾರ್ಥನೆ ಸಲ್ಲಿಸಿ ಎಂದು ಕೋರಿದ್ದಾರೆ.
ರಾಜು ಶ್ರೀವಾಸ್ತವ್ ಅವರು ತಮ್ಮ ಸರಳ ಮತ್ತು ವಿಶಿಷ್ಟ ಶೈಲಿಯಿಂದ ಎಲ್ಲರನ್ನೂ ನಗಿಸುವಲ್ಲಿ ನಿಸ್ಸೀಮರು. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದಾರೆ. ಅವರು ಅನೇಕ ಚಲನಚಿತ್ರಗಳನ್ನು ಸಹ ಕಾಣಿಸಿಕೊಂಡಿದ್ದಾರೆ. ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್‌ ಕಾರ್ಯಕ್ರಮದಿಂದಲೇ ಅವರು ಪ್ರಸಿದ್ಧಿ ಪಡೆದಿದ್ದಾರೆ. ಅನೇಕ ಕಾಮಿಡಿ ಶೋಗಳನ್ನು ನೀಡಿದ್ದಾರೆ. ಕಾಮಿಡಿ ಸರ್ಕಸ್​, ದಿ ಕಪಿಲ್​ ಶರ್ಮಾ ಶೋ, ಶಕ್ತಿಮಾನ್​ ಸೇರಿದಂತೆ ಹಲವಾರು ಶೋಗಳಲ್ಲಿ ಜನರನ್ನು ನಗಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

ಅಶ್ಲೀಲ ಮೆಸೇಜ್​ ಮೂಲಕ ಟೇಬಲ್​ ಟೆನ್ನಿಸ್​ ಆಟಗಾರ್ತಿ ನೈನಾ ಜೈಸ್ವಾಲ್​ಗೆ ಕಿರುಕುಳ: ಕಿಡಿಗೇಡಿ ವಿರುದ್ಧ ದೂರು

ಚಿಕನ್ ಪೀಸ್​ನಲ್ಲಿ ಗಾಂಜಾ ಸಾಗಿಸಿ ಕೈದಿಗಳಿಗೆ ಸರಬರಾಜು ಮಾಡ್ತಿದ್ದ ಚಾಲಾಕಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 10 =
Remember me
