ನವದೆಹಲಿ:ಟಿವಿ ಮಾಧ್ಯಮದ ಚರ್ಚಾ ಕಾರ್ಯಕ್ರಮದಲ್ಲಿ ಕರೊನಾ ವೈರಸ್​ ಕುರಿತು ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ನಾಯಕರೊಬ್ಬರ ದೂರಿನ ಆಧಾರದ ಮೇಲೆ ಲಕ್ಷದ್ವೀಪದ ನಟಿ-ಮಾಡೆಲ್​ ಆಯಿಷಾ ಸುಲ್ತಾನರನ್ನು ದೇಶದ್ರೋಹ ಪ್ರಕರಣದಡಿಯಲ್ಲಿ ಲಕ್ಷದ್ವೀಪ ಪೊಲೀಸರು ಬಂಧಿಸಿದ್ದಾರೆ.
ಕವರತ್ತಿ ಪೊಲೀಸರು ದಾಖಲಿಸಿರುವ ಎಫ್​ಐಆರ್​ ಪ್ರಕಾರ ಭಾರತೀಯ ದಂಡ ಸಂಹಿತೆಯ 124 ಎ (ದೇಶದ್ರೋಹ) ಮತ್ತು 153 ಬಿ (ದ್ವೇಷ ಭಾಷಣ) ಸೆಕ್ಷನ್​ ಅಡಿಯಲ್ಲಿ ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಐಶಾ ಸುಲ್ತಾನ ಅವರು ಲಕ್ಷದ್ವೀಪದ ಚೆತಿಯಾತ್ ದ್ವೀಪದ ನಿವಾಸಿ. ಲಕ್ಷದ್ವೀಪ ಮೂಲದ ಮಾಡೆಲ್​ ಮತ್ತು ನಟಿ ಆಗಿರುವ ಆಯಿಷಾ ಸುಲ್ತಾನ ಮಲಯಾಳಂ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.
ಆಯಿಷಾ ವಿರುದ್ಧ ಲಕ್ಷದ್ವೀಪ ಘಟಕದ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್​ ದೂರು ದಾಖಲಿಸಿದ್ದಾರೆ. ಕವರತ್ತಿ ಪೊಲೀಸ್​ ಠಾಣೆಯಲ್ಲಿ ಬುಧವಾರ ಸಲ್ಲಿಕೆಯಾಗಿರುವ ದೂರಿನ ಪ್ರಕಾರ ಮಲಯಾಳಂ ಟಿವಿ ಚಾನೆಲ್​ನಲ್ಲಿ ಚರ್ಚಾ ಕಾರ್ಯಕ್ರಮದ ವೇಳೆ, ಲಕ್ಷದ್ವೀಪದಲ್ಲಿ ಕರೊನಾ ಹರಡಿಸಲು ಕೇಂದ್ರ ಸರ್ಕಾರ ಜೈವಿಕ ಅಸ್ತ್ರ ಬಳಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ಉಲ್ಲೇಖವಾಗಿದೆ.
ಲಕ್ಷದ್ವೀಪದಲ್ಲಿ ಕರೊನಾ ಶೂನ್ಯ ಪ್ರಕರಣಗಳಿದ್ದವು. ಇಂದು ದಿನವೊಂದಕ್ಕೆ 100 ಪ್ರಕರಣಗಳು ವರದಿಯಾಗುತ್ತಿವೆ. ಇದು ಕೇಂದ್ರ ಸರ್ಕಾರ ಜೈವಿಕ ಅಸ್ತ್ರದ ಪರಿಣಾಮ ಎಂದು ಸ್ಪಷ್ಟವಾಗಿ ಹೇಳುತ್ತೇನೆಂದು ಡಿಬೇಟ್​ ಕಾರ್ಯಕ್ರಮದಲ್ಲಿ ಆಯಿಷಾ ಸುಲ್ತಾನ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿರುವ ಬಿಜೆಪಿ ಅಧ್ಯಕ್ಷ ಆಯಿಷಾ ಅವರ ಹೇಳಿಕೆ ದೇಶದ್ರೋಹದ್ದಾಗಿದೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದೂರಿನ ಬೆನ್ನಲ್ಲೇ ಫೇಸ್​ಬುಕ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಆಯಿಷಾ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಸತ್ಯ ಮಾತ್ರ ಮೇಲುಗೈ ಸಾಧಿಸುತ್ತದೆ. ದೂರು ದಾಖಲಿಸಿದ ಬಿಜೆಪಿ ನಾಯಕರು ಸಹ ಲಕ್ಷದ್ವೀಪದವರು. ತನ್ನ ನೆಲಕ್ಕೆ ದ್ರೋಹ ಮಾಡುವುದನ್ನು ಅವರು ಮುಂದುವರಿಸುತ್ತಿದ್ದಂತೆ, ನಾನು ಅದಕ್ಕಾಗಿ ಹೋರಾಡುತ್ತೇನೆ. ದ್ರೋಹ ಮಾಡಿದವರು ನಾಳೆ ಪ್ರತ್ಯೇಕವಾಗುತ್ತಾರೆ ಎಂದು ಆಯಿಷಾ ಸುಲ್ತಾನ ಹೇಳಿದ್ದಾರೆ.(ಏಜೆನ್ಸೀಸ್​)
ಭಾರತೀಯ ಕಂಪೆನಿಗಳಿಂದ ಸೀಫುಡ್​ ಆಮದು ನಿಲ್ಲಿಸಿದ ಚೀನಾ! ಕಾರಣ ಏನು ಗೊತ್ತ?

ಉಟ್ಟ ಸೀರೆಯಲ್ಲೇ ಮ್ಯಾನ್‌ಹೋಲ್‌ ಒಳಗಿಳಿದ ಮುನ್ಸಿಪಲ್‌ ಅಧಿಕಾರಿ: ಶ್ಲಾಘನೆಗಳ ಮಹಾಪೂರ

ಬೈಕ್​ ಮೇಲಿದ್ದ ಹೆಲ್ಮೆಟ್​ ನುಂಗಿದ ಆನೆ! ಪಾಪ ಹಸಿವಾಗಿತ್ತೇನೋ… ಸಖತ್​ ವೈರಲ್​ ಆಗ್ತಿದೆ ಈ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − six =
Remember me
