ಶ್ರೀನಗರ:ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಂಬಾನ್​ ಜಿಲ್ಲೆಯ ಮಕೆರ್ಕೊಟೆ ಏರಿಯಾದ ಖೂನಿ ನಾಲಾದಲ್ಲಿ ನಡೆದಿದೆ.
ಪ್ರಸ್ತುತ ಆ ಏರಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸುಮಾರು 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಸದ್ಯ ಓರ್ವನನ್ನು ರಕ್ಷಣೆ ಮಾಡಲಾಗಿದೆ. ಈ ಘಟನೆಯ ಬಗ್ಗೆ ಕೇಂದ್ರ ಸಚಿವ ಜೀತೇಂದ್ರ ಸಿಂಗ್​ ಟ್ವೀಟ್​ ಮಾಡಿದ್ದು, ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಗರಿಕ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಂಬಾನ್​ ಜಿಲ್ಲೆಯಲ್ಲಿರುವ ರಂಬಾನ್​ ಮತ್ತು ರಮ್ಸು ರಾಷ್ಟ್ರೀಯ ಹೆದ್ದಾರಿ ನಡುವಿನ ನಿರ್ಮಾಣ ಹಂತದ ಸುರಂಗದ ಒಂದು ಭಾಗ ದುರಾದೃಷ್ಟವಶಾತ್ ಕುಸಿದಿದೆ. ಜಿಲ್ಲಾಧಿಕಾರಿ ಮುಸ್ರಾತ್​ ಇಸ್ಲಾಂ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಸುಮಾರು 10 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅನೇಕರು ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಜೀತೇಂದ್ರ ಸಿಂಗ್​ ಟ್ವೀಟ್​ ಮಾಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ.(ಏಜೆನ್ಸೀಸ್​)
ಮಂಡ್ಯದ ಮಟನ್ ಶಾಪ್ ಅಭಿಮಾನಿಯ ಬಗ್ಗೆ ಬೋಲ್ಡ್​ ಬ್ಯೂಟಿ ಸನ್ನಿ ಲಿಯೋನ್ ಹೇಳಿದ್ದು ಹೀಗೆ…

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ದಿಢೀರ್​ ಶಾಕ್​ ಕೊಟ್ಟ ಸರ್ಕಾರ

ಕೇಳಬಾರದ ಪ್ರಶ್ನೆ ಕೇಳಿ ನಟಿ ಮಾಳವಿಕರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ನೆಟ್ಟಿಗ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + four =
Remember me
