ಕೊಚ್ಚಿ:ಖ್ಯಾತ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಸೋರಿಕೆ ಆಗಿರುವ ಕುರಿತು ಸಂತ್ರಸ್ತ ನಟಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರಿಗೂ ಪತ್ರದ ಮೂಲಕ ಸೂಕ್ತ ತನಿಖೆಗೆ ಒತ್ತಾಯ ಮಾಡಿದ್ದಾರೆ.
ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ಸಂತ್ರಸ್ತೆ ಪತ್ರ ಬರೆದಿದ್ದು, ಎರ್ನಾಕುಲಂ ಜಿಲ್ಲಾ ಸೆಷನ್ಸ್​ ಕೋರ್ಟ್​ನಿಂದ ವಿಡಿಯೋ ಸೋರಿಕೆ ಆಗಿದೆ ಎಂದು ಆರೋಪಿಸಿದ್ದಾರೆ. ಅನುಮತಿಯಿಲ್ಲದೆ ವಿಡಿಯೋ ಓಪನ್​ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಮೂಲಕ ನನ್ನ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಲಾಗಿದೆ ಎಂದು ನಟಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.
ಇನ್ನು ಇದೇ ಸಂದರ್ಭದಲ್ಲಿ ಈ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಮಲಯಾಳಂ ನಟ ದಿಲೀಪ್​ ಕುಮಾರ್, ತನಿಖಾಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಮತ್ತೊಂದು ಆರೋಪವನ್ನು ಎದುರಿಸುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನೀಡಿದ ಲಿಖಿತ ವಾದಗಳಿಗೆ ದಿಲೀಪ್ ಇಂದು ಉತ್ತರ ನೀಡಲಿದ್ದಾರೆ. ದಿಲೀಪ್​ ಕುಮಾರ್​ ಸೇರಿದಂತೆ ಇತರೆ ಆರೋಪಿಗಳ ನಿರೀಕ್ಷಣಾ ಜಾಮೀನಿನ ಕುರಿತು ಹೈಕೋರ್ಟ್‌ನಲ್ಲಿ ನಿನ್ನೆ ಸುದೀರ್ಘ ವಾದ-ಪ್ರತಿವಾದಗಳ ನಂತರ ಪ್ರಾಸಿಕ್ಯೂಷನ್ ತನ್ನ ಬಳಿ ಇರುವ ಸಾಕ್ಷ್ಯವನ್ನು ಬರೆದುಕೊಂಡಿದೆ.
ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಾಧಾರಗಳಿರುವುದಾಗಿ ಹೇಳಿದೆ. ಅಲ್ಲದೆ, ಈ ಪ್ರಕರಣದ ತನಿಖೆಯಲ್ಲಿ ಪೊಲೀಸ್​ ಅಧಿಕಾರಿ ಬೈಜು ಪೌಲೋಸ್​ ಪಾತ್ರವಿಲ್ಲ. ಬೈಜು ಪೌಲೋಸ್ ಅವರಿಗೆ ದಿಲೀಪ್​ ಆಪ್ತ ನಿರ್ದೇಶಕ ಬಾಲಚಂದ್ರಕುಮಾರ್ ಅವರ ಹಿಂದಿನ ಪರಿಚಯವೂ ಇಲ್ಲ. ಆರೋಪಿ ತನ್ನ ಸಹ ನಟಿಯ ಮೇಲೆ ಅತ್ಯಾಚಾರ ಎಸಗಲು ಬೇರೊಬ್ಬ ವ್ಯಕ್ತಿಯನ್ನು ನೇಮಿಸಿಕೊಂಡಿದ್ದ ಎಂಬುದಕ್ಕೆ ಸಾಕ್ಷ್ಯಾಧಾರಗಳು ಬಲವಾಗಿವೆ ಎಂದು ಕೋರ್ಟ್​ ಹೇಳಿದೆ ಎನ್ನಲಾಗಿದೆ.
ಕೋರ್ಟ್​ ಹೇಳಿಕೆಗೆ ಆರೋಪಿಗಳು ತಮ್ಮ ಅಭಿಪ್ರಾಯವನ್ನು ಕೇಳಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ಇಂದು ತಮ್ಮ ಮೇಲಿನ ಆರೋಪಗಳಿಗೆ ಲಿಖಿತವಾಗಿ ಉತ್ತರವನ್ನು ನೀಡಲಿದ್ದಾರೆ. ತನಿಖಾಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಕ್ರೈಂ ಬ್ರಾಂಚ್ ಹೇಳಿದ ಸುಳ್ಳಗಳನ್ನು ಪ್ರಾಸಿಕ್ಯೂಷನ್ ಪುನರಾವರ್ತಿಸುತ್ತಿದೆ ಎಂದು ದಿಲೀಪ್ ಪರ ವಕೀಲ ಕೆ.ರಾಮನ್ ಪಿಳ್ಳೈ ಹೇಳಿದರು.
ನನ್ನ ಕಕ್ಷಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಸೋಮವಾರ (ಫೆ.7) ಬೆಳಗ್ಗೆ 10.15ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್ ಆದೇಶ ನೀಡಲಿದೆ. ದಿಲೀಪ್, ಅವರ ಸಹೋದರ ಅನೂಪ್, ಸೋದರ ಸಂಬಂಧಿ ಅಪ್ಪು ಹಾಗೂ ಸ್ನೇಹಿತರಾದ ಬೈಜು ಚೆಂಗಮನಾಡು ಮತ್ತು ಶರತ್ ಅವರು ನಿರೀಕ್ಷಣಾ ಅರ್ಜಿ ಸಲ್ಲಿಸಿದ್ದಾರೆ.
ದೌರ್ಜನ್ಯಕ್ಕೆ ಒಳಗಾದ ನಟಿ ಸಾಮಾನ್ಯ ನಟಿಯೇನಲ್ಲ. ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡದಲ್ಲಿ ಸಾಕಷ್ಟು ಸಿನಿಮಾ ಮಾಡಿರುವ ಬಹುಭಾಷಾ ನಟಿ. ಐದು ವರ್ಷಗಳ ಹಿಂದೆ ಶೂಟಿಂಗ್​ ಮುಗಿಸಿ ಕಾರಿನಲ್ಲಿ ಹಿಂದಿರುಗುವಾಗ ಕಿಡಿಗೇಡಿಗಳ ಗುಂಪೊಂದು ಅವರನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಹೇಳಲಾಗಿದೆ. ಇದೇ ಪ್ರಕರಣದಲ್ಲಿ ತದನಂತರದಲ್ಲಿ ಮಲಯಾಳಂ ನಟ ದಿಲೀಪ್​ರನ್ನು ಬಂಧಿಸಲಾಗಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದು, ಇದೀಗ ಈ ತನಿಖಾಧಿಕಾರಿಗಳ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು, ಮತ್ತಷ್ಟು ಸ್ಫೋಟಕ ಸಂಗತಿಗಳು ಹೊರಬರುತ್ತಿವೆ.(ಏಜೆನ್ಸೀಸ್​)
ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ಮಾಡಿದ ಆರೋಪಿ ಪೊಲೀಸ್​ ವಿಚಾರಣೆಯಲ್ಲಿ ಹೇಳಿದ್ದು ಹೀಗೆ…

ಟೆಸ್ಲಾ ಇಲೆಕ್ಟ್ರಿಕ್‌ ಕಾರು ಭಾರತಕ್ಕೆ: ಎಲಾನ್‌ ಮಸ್ಕ್‌ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ- ಕಾರಣ ಇಲ್ಲಿದೆ…

VIDEO: ಹೊಟ್ಟೆ-ಬಟ್ಟೆ ಕಟ್ಟಿ ಮಾಡಿದ ಆಸ್ತಿ ಬರೆದು ಕೊಟ್ಟರೂ ನಿಲ್ಲದ ದಾಹ: ಕೋಟಿ-ಕೋಟಿ ಆಸ್ತಿ ಒಡತಿ ಬೀದಿ ಪಾಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
