ಚೆನ್ನೈ:ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸರ್ಕಾರಿ ಬಸ್​​ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು.
ಚೆನ್ನೈನ ರಾಧಾಕೃಷ್ಣ ಸಲಾಯ್​ ರಸ್ತೆಯಲ್ಲಿ ಸ್ಟಾಲಿನ್​ ಪ್ರಯಾಣ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಭರವಸೆ ಸ್ಟಾಲಿನ್​ ಪಕ್ಷದ ಪ್ರಮುಖ ಪ್ರಚಾರವಾಗಿತ್ತು. ಅಧಿಕಾರಕ್ಕೆ ಬಂದ ಕೂಡಲೇ ಭರವಸೆಯನ್ನು ಕಾರ್ಯರೂಪಕ್ಕೆ ತಂದು ಸ್ಟಾಲಿನ್​ ಮಾತು ಉಳಿಸಿಕೊಂಡರು. ಇದೀಗ ತಮ್ಮ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್​ನಲ್ಲಿ ಪ್ರಯಾಣ ಮಾಡಿ ಟಿಕೆಟ್​ ವಿತರಣೆಯಲ್ಲಿ ಏನಾದರೂ ಸಮಸ್ಯೆ ಇದೆಯೇ ಎಂದು ವಿಚಾರಿಸಿದರು.
ಸ್ಟಾಲಿನ್ ತಮ್ಮ ಸರ್ಕಾರದ ಮೊದಲ ವಾರ್ಷಿಕೋತ್ಸವಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಉಪಹಾರ ನೀಡುವುದು ಸೇರಿದಂತೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ.
ಸ್ಟಾಲಿನ್ ಅವರು ಡಿಎಂಕೆ ಸಂಸ್ಥಾಪಕ ಸಿಎನ್ ಅಣ್ಣಾದೊರೈ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ತಂದೆ ಎಂ ಕರುಣಾನಿಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಿದರು. ಹತ್ತು ವರ್ಷಗಳ ಎಐಎಡಿಎಂಕೆ ಆಡಳಿತದ ನಂತರ 2021ರಲ್ಲಿ ಸ್ಟಾಲಿನ್ ಅಧಿಕಾರಕ್ಕೆ ಬಂದಿದ್ದಾರೆ.(ಏಜೆನ್ಸೀಸ್​)
ನಯನತಾರಾ-ವಿಘ್ನೇಶ್​ ಶಿವನ್​ ಮದುವೆ ದಿನಾಂಕ ಫಿಕ್ಸ್​: ಇಬ್ಬರಿಗೂ ಇಷ್ಟವಾದ ಸ್ಥಳದಲ್ಲೇ ವಿವಾಹ!

ಉದ್ಯೋಗಿಗಳಿಗೆ 30 ನಿಮಿಷದ ನಿದ್ರಾ ವಿರಾಮ ಘೋಷಿಸಿದ ಬೆಂಗಳೂರಿನ ಸ್ಟಾರ್ಟ್ ​ಅಪ್​ ಕಂಪನಿ!

ಪತಿ ಸತ್ತ ಬಳಿಕ ಇನ್​ಸ್ಟಾಗ್ರಾಂ ಬಳಸಿ ಟ್ರೋಲ್​ಗೊಳಗಾದ ಹಿರಿಯ ನಟಿ ನೀತೂಕಪೂರ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
