ಭುವನೇಶ್ವರ:ಸಾಫ್ಟ್​ವೇರ್​ ಇಂಜಿನಿಯರ್​ ಒಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಒಡಿಶಾದಲ್ಲಿ ನಡೆದಿದ್ದು, ಮೃತಳ ಕುಟುಂಬ ಆಕೆಯ ಬಾಯ್​ಫ್ರಂಡ್​ ವಿರುದ್ಧ ಗಂಭೀರ ಆರೋಪ ಮಾಡಿದೆ.
ಮೃತ ಟೆಕ್ಕಿಯನ್ನು ಶ್ವೇತಾ ಉತ್ಕಲ್​ ಕುಮಾರಿ ಎಂದು ಗುರುತಿಸಲಾಗಿದೆ. ಈಕೆ ಒಡಿಶಾದ ಭದ್ರಕ್​ ನಿವಾಸಿ. ಈಕೆಯ ಬಾಯ್​ಫ್ರೆಂಡ್​ ಸೌಮ್ಯಜಿತ್​ ಮೊಹಪಾತ್ರ ವಿರುದ್ಧ ಶ್ವೇತಾ ಕುಟುಂಬ ದೂರು ದಾಖಲಿಸಿದೆ. ಶ್ವೇತಾ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡ ಬಳಿಕ ಆಕೆಯ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಕ್ಕೆ ಹೆದರಿ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ.
ಶ್ವೇತಾಳ ಶವ ಶನಿವಾರ ರಾತ್ರಿ ತನ್ನ ಫ್ಲ್ಯಾಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆ ಸ್ನೇಹಿತೆ ಫ್ಲ್ಯಾಟ್​ನಲ್ಲಿ ಇಲ್ಲದಿರುವ ಸಮಯ ನೋಡಿ ಶ್ವೇತಾ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಆಕೆಯ ಕುಟುಂಬದವರು ದೂರು ದಾಖಲಿಸಿದ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫ್ಲ್ಯಾಟ್​ನಲ್ಲಿ ದೊರೆತ ಶ್ವೇತಾಳ ಮೊಬೈಲ್​ ಮತ್ತು ಡೈರಿಯಿಂದ ಸೌಮ್ಯಜಿತ್​ ಜೊತೆಗಿನ ಆಕೆಯ ಸಂಬಂಧದ ಬಗ್ಗೆ ತಿಳಿದುಕೊಂಡಿದ್ದಾರೆ.
ಸಾವಿಗೂ ಮುನ್ನ ಶ್ವೇತಾ 15 ಬಾರಿ ಸೌಮ್ಯಜಿತ್​ಗೆ ಕರೆ ಮಾಡಿದ್ದಾಳೆ. ಆದರೆ, ಆತ ಕರೆ ಸ್ವೀಕರಿಸಿಲ್ಲ. ಇಬ್ಬರ ನಡುವೆ ನಡೆದಿರುವ ಸಂಭಾಷಣೆಯ ಆಡಿಯೋ ತುಣುಕು ಸಹ ತದನಂತರದಲ್ಲಿ ಬೆಳಕಿಗೆ ಬಂದಿದೆ. ನನ್ನ ಜೀವನದಿಂದ ಆಚೆ ಹೋಗುವಂತೆ ಸೌಮ್ಯಜಿತ್​ ಕೇಳಿರುವುದು ಆಡಿಯೋದಲ್ಲಿದೆ. ಇನ್ನು ಇಬ್ಬರ ಮದುವೆಗೆ ಮಾತುಕತೆಯು ನಡೆದಿತ್ತಂತೆ. ಸೌಮ್ಯಜಿತ್​ ಕುಟುಂಬದ ಜೊತೆ ಮದುವೆ ಬಗ್ಗೆ ಮಾತನಾಡಿದಾಗ ಸೌಮ್ಯಜಿತ್​ ತಾಯಿ 30 ಲಕ್ಷ ರೂಪಾಯಿ ವರದಕ್ಷಿಣೆ ಕೇಳಿದರು ಎಂದು ಆರೋಪ ಮಾಡಿದ್ದಾರೆ.

ಪ್ರಕರಣವು ನಾನಾ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ಬೆನ್ನಲ್ಲೇ ಸೌಮ್ಯಜಿತ್​​ನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಅತ್ಯಾಚಾರ ಎಸಗಿ ಬಿಜೆಪಿ ನಾಯಕಿ ಸೊನಾಲಿ ಕೊಲೆ? ಬೆಳಿಗ್ಗೆ ಬಂದ ಕರೆಯೇ ಅನುಮಾನಕ್ಕೆ ದಾರಿ!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಲಾರಿ-ಕ್ರೂಸರ್​ ನಡುವೆ ಭೀಕರ ಅಪಘಾತ: 9 ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ

ಭಾರತದ ಚೌಕಿ ಮೇಲಿನ ದಾಳಿಗೆ 30 ಸಾವಿರ ರೂ. ಇನಾಮು: ಬಂಧಿತ ಉಗ್ರ ಬಿಚ್ಚಿಟ್ಟ ಭಯಾನಕ ರಹಸ್ಯವಿದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
