ನವದೆಹಲಿ:ಯಾವುದೇ ಕಾರಣಕ್ಕೂ ದೆಹಲಿಯಲ್ಲಿ ಲಾಕ್​ಡೌನ್​ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಕೇಜ್ರಿವಾಲ್​, ದೆಹಲಿಯಲ್ಲಿರುವ ನಿರ್ಬಂಧಗಳನ್ನು ಎನ್‌ಸಿಆರ್‌ನಲ್ಲಿಯೂ ಜಾರಿಗೊಳಿಸಬೇಕು ಎಂದು ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾರೂ ಏನನ್ನೂ ಹೇಳಲು ಸಾಧ್ಯವಿಲ್ಲ. ಪಾಸಿಟಿವಿಟಿ ದರವು ಶೇಕಡಾ 25 ಕ್ಕೆ ಬರುತ್ತಿದೆ. ಮುಂದೆ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.
ಸದ್ಯಕ್ಕೆ ನಗರದಲ್ಲಿ ಯಾವುದೇ ಲಾಕ್‌ಡೌನ್ ಇರುವುದಿಲ್ಲ ಮತ್ತು ಈ ಸಮಯದಲ್ಲಿ ಜನರನ್ನು ನಿಭಾಯಿಸುವುದು ಹೆಚ್ಚು ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಜನರ ಉದ್ಯೋಗದ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂದು ಕೇಜ್ರಿವಾಲ್ ತಿಳಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗಿದ್ದರೂ, ಶೀಘ್ರದಲ್ಲೇ ಅವುಗಳನ್ನು ತೆಗೆದುಹಾಕಲಾಗುತ್ತದೆ ಎಂದರು.
ಇತ್ತೀಚೆಗಷ್ಟೇ ಕೇಜ್ರಿವಾಲ್​ ಅವರಿಗೆ ಕೋವಿಡ್​ ಪಾಸಿಟಿವ್​ ಆಗಿತ್ತು. ಮನೆಯಲ್ಲೇ ಒಂದು ವಾರಗಳ ಕಾಲ ಕ್ವಾರಂಟೈನ್​ ಆಗಿ ಕೇಜ್ರಿವಾಲ್​ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಗುಣಮುಖರಾಗಿದ್ದು, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.(ಏಜೆನ್ಸೀಸ್​)
ಸ್ವಂತ ಖರ್ಚಿನಲ್ಲಿ ಗಣಿತ ಲ್ಯಾಬ್ ತೆರೆದು ಮಾದರಿಯಾದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ

ಪಿಂಚಣಿ ಹಣದಲ್ಲಿ ಜೀವನ ದೂಡುತ್ತಿರುವ ವದ್ಧನಿಗೆ GST ನೋಟಿಸ್​: ತೆರಿಗೆ ಮೊತ್ತ ಕೇಳಿದ್ರೆ ಶಾಕ್​ ಆಗ್ತೀರಾ!

ಕೊರಗಜ್ಜನ ವೇಷ ಧರಿಸಿ ಮದ್ವೆ ಮನೇಲಿ ಡಾನ್ಸ್​, ಇಬ್ಬರ ಬಂಧನ: ಆರೋಪಿ ಬಿಡುಗಡೆಗೆ ಒತ್ತಡ ಹೇರಿದ್ದ ಬಿಜೆಪಿ ಮುಖಂಡ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
