ಹೈದರಾಬಾದ್​:ಒಟ್ಟಿಗೆ ಮದುವೆ ಆಗಿ ಜೀವನ ನಡೆಸಲು ಜಾತಿ ವ್ಯವಸ್ಥೆ ಅಡ್ಡಿಯಾದ ಹಿನ್ನೆಲೆಯಲ್ಲಿ ಯುವಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ನಿರ್ಮಲ್​ ಜಿಲ್ಲೆಯ ಮಮದಾ ಮಂಡಲದಲ್ಲಿ ನಡೆದಿದೆ.
ನಿಶಿತಾ (18) ಮತ್ತು ಹರೀಶ್​ (21) ಮೃತ ದುರ್ದೈವಿಗಳು. ನಿಶಿತಾ ಇತ್ತಿಚೆಗಷ್ಟೇ ಪೊಂಕಲ್​ ಗ್ರಾಮದಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಿದ್ದಳು. ಹರೀಶ್​ ನಿರ್ಮಲ್​ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ. ಇಬ್ಬರು ಸಹ ಒಂದೇ ಗ್ರಾಮದ ಒಂದೇ ಕಾಲನಿಯವರು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು.
ಆದರೆ, ಇಬ್ಬರ ಜಾತಿ ಬೇರೆ ಬೇರೆ ಆಗಿರುವುದರಿಂದ ಹಿರಿಯರು ತಮ್ಮ ಮದುವೆ ಒಪ್ಪುವುದಿಲ್ಲ ಅಂದುಕೊಂಡು ಇಬ್ಬರು ಮನೆಯೊಂದರಲ್ಲಿ ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಈ ಘಟನೆ ನಡೆದಿದೆ.
ನಮ್ಮಿಬ್ಬರನ್ನು ಒಟ್ಟಿಗೆ ಇರಲು ಬಿಡುವುದಿಲ್ಲ. ಹೀಗಾಗಿ ನಾವು ಸಾಯುತ್ತಿದ್ದೇವೆ. ನಮ್ಮನ್ನು ಕ್ಷಮಿಸಿ ಎಂದು ಸಾಯುವ ಮುನ್ನ ಹರೀಶ್​ ತನ್ನ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ಹಾಕಿಕೊಂಡಿದ್ದಾರೆ. ಇದು ಸ್ನೇಹಿತರು ಮತ್ತು ಮನೆಯವರಿಗೆ ತಿಳಿದು, ಅವರಿಗಾಗಿ ಹುಡುಕಾಡಿದಾಗ ಮನೆಯಲ್ಲೇ ಇಬ್ಬರ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ಬಿಲಿಯನೇರ್​ ಉದ್ಯಮಿ ಬಿಲ್​ ಗೇಟ್ಸ್​ ಕುರಿತು ಶಾಕಿಂಗ್​ ವಿಚಾರ ಬಿಚ್ಚಿಟ್ಟ ಮಾಜಿ ಉದ್ಯೋಗಿ!

ಒಂದು ಕೈಯಲ್ಲಿ ಮಗು, ಇನ್ನೊಂದು ಕೈಯಲ್ಲಿ ದೊಡ್ಡ ಸೂಟ್​ಕೇಸ್​: ಭಯಾನಕ ಘಟನೆ ಸಿಸಿಟಿವಿಯಿಂದ ಬಯಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
