ಹೈದರಾಬಾದ್​:ಕೌಟುಂಬಿಕ ಕಲಹದಿಂದ ಬೇಸತ್ತು ವಕೀಲೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಚಾಂದನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಕೀಲೆಯನ್ನು ಶಿವಾನಿ ಎಂದು ಗುರುತಿಸಲಾಗಿದೆ. ಈಕೆ ಲಕ್ಷ್ಮೀ ವಿಹಾರದ 1ನೇ ಹಂತದಲ್ಲಿರುವ ಡಿಫೆನ್ಸ್​ ಕಾಲನಿಯಲ್ಲಿ ವಾಸವಿದ್ದರು. ಶನಿವಾರ ರಾತ್ರಿ ಕಟ್ಟದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಾನಿ ಐದು ವರ್ಷಗಳ ಹಿಂದೆ ಅರ್ಜುನ್​ ಎಂಬಾತನನ್ನು ಮದುವೆ ಆಗಿದ್ದರು. ದಂಪತಿ ಓರ್ವ ಮಗನಿದ್ದಾನೆ.
ಇತ್ತೀಚೆಗೆ ಕುಟುಂಬದಲ್ಲಿ ಪತಿ-ಪತ್ನಿ ನಡುವೆ ಹೆಚ್ಚಾಗಿ ಗಲಾಟೆ ನಡೆಯುತ್ತಿತ್ತು. ಇದರಿಂದ ತೀವ್ರವಾಗಿ ಮನನೊಂದಿದ್ದ ಶಿವಾನಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಪತ್ನಿ ಸಾವಿನ ಸುದ್ದಿ ಕೇಳಿದ ಪತಿ ಅರ್ಜುನ್​ ಚಾಂದನಗರ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.(ಏಜೆನ್ಸೀಸ್​)
ಎರಡನೇ ಮದುವೆಗೆ ರೆಡಿಯಾದ ನಾಗಚೈತನ್ಯ! ಹುಡುಗಿ ಯಾರು? ಯಾವಾಗ ಮದುವೆ? ಇಲ್ಲಿದೆ ಮಾಹಿತಿ

ರಾಜ್ಯಸಭೆಯ ಸಂಬಳ ರೈತರ ಮಕ್ಕಳ ಶಿಕ್ಷಣಕ್ಕೆ ಮೀಸಲು: ಹರ್ಭಜನ್​ ಸಿಂಗ್ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ!

KGF-2 ಕನ್ನಡದ ಹೆಮ್ಮೆಯಲ್ಲ ಎನ್ನುತ್ತಲೇ ದಂಡುಪಾಳ್ಯ ಚಿತ್ರದ ಭಯಾನಕ ಉದಾಹರಣೆ ಕೊಟ್ಟ ಭಾಸ್ಕರ್​ ರಾವ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
