ಪಟನಾ:ರೈಲ್ವೆ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ವಿರೋಧಿಸಿ ಉದ್ಯೋಗ ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯ ವೇಳೆ ರೈಲಿಗೆ ಬೆಂಕಿ ಹಚ್ಚಲಾಗಿದ್ದು, ರೈಲುಗಳತ್ತ ಕಲ್ಲುಗಳನ್ನು ಎಸೆದು ಹಾನಿ ಉಂಟು ಮಾಡಿದ್ದಾರೆ.
ರೈಲ್ವೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಕಾಂಕ್ಷಿಗಳು ಬಿಹಾರದ ಗಯಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರೈಲನ್ನು ಧ್ವಂಸಗೊಳಿಸಿದ್ದಾರೆ. ಸಿಬಿಟಿ-2 ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗಿಲ್ಲ. 2019 ರಲ್ಲಿ ನೋಟಿಫಿಕೆಶನ್​ ಹೊರಡಿಸಲಾದ ರೈಲ್ವೆ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಅಪ್‌ಡೇಟ್ ಇಲ್ಲ. ಫಲಿತಾಂಶಕ್ಕಾಗಿ ಇನ್ನೂ ಕಾಯಲಾಗುತ್ತಿದೆ. ಸಿಬಿಟಿ-2 ಪರೀಕ್ಷೆಯನ್ನು ರದ್ದುಪಡಿಸಲು ಮತ್ತು 2019ರ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲು ನಾವು ಒತ್ತಾಯಿಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
Gaya, Bihar | Aspirants vandalized train over alleged irregularities in Railway exam
CBT 2 exam date was not notified; no update on Railway exam which was notified in 2019…Result is still awaited…We demand cancellation of CBT 2 exam & release of exam result: Protesterpic.twitter.com/9eyW8JphYa
— ANI (@ANI)January 26, 2022

ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡ ಬೆನ್ನಲ್ಲೇ ರೈಲ್ವೆ ಇಲಾಖೆ ನಾನ್​ ಟೆಕ್ನಿಕಲ್​ ಪಾಪುಲರ್​ ಕ್ಯಾಟಗರಿ (NTPC) ಮತ್ತು ಹಂತ 1ರ ಪರೀಕ್ಷೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಲ್ಲದೆ, ವಿವಿಧ ರೈಲ್ವೆ ನೇಮಕಾತಿ ಮಂಡಳಿಗಳ (ಆರ್‌ಆರ್‌ಬಿ) ಅಡಿಯಲ್ಲಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ಅನುತ್ತೀರ್ಣರಾದವರ ಕುಂದುಕೊರತೆಗಳನ್ನು ಪರಿಶೀಲಿಸುವ ಸಮಿತಿಯನ್ನು ಸಹ ರೈಲ್ವೆ ಇಲಾಖೆ ರಚಿಸಿದ್ದು, ಎರಡು ಕಡೆಯವರ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ.
ಮಂಗಳವಾರ, ರೈಲ್ವೆ ಇಲಾಖೆ ತನ್ನ ಉದ್ಯೋಗಾಕಾಂಕ್ಷಿಗಳಿಗೆ ಸಾಮಾನ್ಯ ಸೂಚನೆಯೊಂದನ್ನು ನೀಡಿತ್ತು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ರೈಲ್ವೆಯಲ್ಲಿ ನೇಮಕಾತಿ ಪಡೆಯುವುದನ್ನು ನಿರ್ಬಂಧಿಸಲಾಗುವುದು ಎಂದು ಎಚ್ಚರಿಸಿತ್ತು. ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ ದಿನದ ಬೆನ್ನಲ್ಲೇ ಈ ಸೂಚನೆ ನೀಡಲಾಗಿದೆ.
ಆದರೆ, ಇದೀಗ ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿಗೆ ಕಲ್ಲು ತೂರಿದ್ದಲ್ಲದೆ, ಬೆಂಕಿ ಹಂಚಿದ್ದು, ಪ್ರತಿಭಟನೆಯನ್ನು ಹಿಂಸಾತ್ಮಕ ರೂಪಕ್ಕೆ ತಿರುಗಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ರೈಲು ನಿಲ್ದಾಣದಲ್ಲಿ ಕಲ್ಲುಗಳು ಬಿದ್ದಿರುವುದನ್ನು ವಿಡಿಯೋಗಳಲ್ಲಿ ನೋಡಬಹುದಾಗಿದೆ.(ಏಜೆನ್ಸೀಸ್​)
ನ್ಯಾಯಾಧೀಶರ ಕಟು ಟೀಕೆ ವಿರುದ್ಧ ಮೇಲ್ಮನವಿ: ನಟ ವಿಜಯ್​ ಪರ ತೀರ್ಪು ನೀಡಿದ ಮದ್ರಾಸ್​ ಹೈಕೋರ್ಟ್ ​

ಆರೋಗ್ಯ ಸಚಿವರೇ ಈ ನಿರ್ಲಕ್ಷ್ಯಕ್ಕೆ ಯಾರು ಹೊಣೆ? ನಾಗರಹಾವು ಕಚ್ಚಿದ ಮಹಿಳೆಗೆ ಚುಚ್ಚುಮದ್ದು ಸಿಗದೇ ಸಾವು

3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eight =
Remember me
