ಲಖನೌ:2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 202ರ ಅವಶ್ಯಕತೆ ಇದೆ. ಈಗಾಗಲೇ ಬಿಜೆಪಿ ಮ್ಯಾಜಿಕ್​ ನಂಬರ್​ ಅನ್ನು ದಾಟಿ 262 ಸ್ಥಾನಗಳೊಂದಿಗೆ ಮುನ್ನುಗುತ್ತಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರ ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ಮತದಾನೋತ್ತರ ಸಮೀಕ್ಷೆಯಂತೆಯೇ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರುವತ್ತ ಬಿಜೆಪಿ ಹೆಜ್ಜೆ ಹಾಕಿದೆ. ತಾವು ಸ್ಪರ್ಧಿಸಿರುವ ಗೋರಖ್​ಪುರ್​ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಅವರು ಭಾರೀ ಅಂತರದಲ್ಲಿ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.(ಏಜೆನ್ಸೀಸ್​)
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ..
ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 1 =
Remember me
