ಲಖನೌ:ಪಿಯು ವಿದ್ಯಾರ್ಥಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಲಿತ್​ಪುರ್​ ಜಿಲ್ಲೆಯಲ್ಲಿ ನಡೆದಿದ್ದು, ಒಟ್ಟು 28 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳಲ್ಲಿ ಸಂತ್ರಸ್ತೆಯ ತಂದೆ, ಸಮಾಜವಾದಿ ಪಾರ್ಟಿ (ಎಸ್​ಪಿ) ಮತ್ತು ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ)ಯ ಜಿಲ್ಲಾಧ್ಯಕ್ಷರು ಕೂಡ ಸೇರಿದ್ದಾರೆ. ಆರನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ತಂದೆ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮತ್ತು ಅಂದಿನಿಂದ ಅನೇಕ ಬಾರಿ ಬಲವಂತವಾಗಿ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಅನೇಕರಿಗೆ ಫೋನ್​ ಮಾಡಿ, ವ್ಯವಹಾರದ ಮಾತುಗಳನ್ನಾಡಿ ಮನೆಗೆ ಕರೆಸಿ, ಅವರಿಂದಲೂ ಲೈಂಗಿಕ ದೌರ್ಜನ್ಯ ಎಸಗಿಸಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾಳೆ. ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷ ತಿಲಕ್​ ಯಾದವ್​ ಮತ್ತು ಆತನ ಮೂವರು ಕಿರಿಯ ಸಹೋದರರು ಹಾಗೂ ಬಿಎಸ್​ಪಿ ಜಿಲ್ಲಾಧ್ಯಕ್ಷ ದೀಪಕ್​ ಅಹಿರ್ವರ್​ ಮತ್ತು ಇನ್ನೊಬ್ಬ ಬಿಎಸ್​​ಪಿ ನಾಯಕ ನೀರಜ್​ ತಿವಾರಿ ಹಾಗೂ ಇನ್ನಿತರ ಕುಟುಂಬದ ಸದಸ್ಯರು ಬಲವಂತಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಈ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದ್ದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಕಾಮುಕ ತಂದೆ ಹೆದರಿಸಿದ್ದಾನೆ. ತಂದೆಯ ಕರಾಳತೆಯನ್ನು ಸಹಿಸದೇ ಕೊನೆಗೂ ಪೊಲೀಸ್​ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ ಮತ್ತು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
28 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆಕೆಗೆ ಓರ್ವ ಸಹೋದರನಿದ್ದಾನೆ. ಆಕೆ ನೀಡಿರುವ ಮಾಹಿತಿಯನ್ನು ಸದ್ಯ ಪರಿಶೀಲಿಸಲಾಗುತ್ತಿದೆ ಎಂದು ಲಲಿತ್​ಪುರ್​ ಎಎಸ್​ಪಿ ಗಿರಿಜೇಶ್​ ಕುಮಾರ್​ ತಿಳಿಸಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ. ಈ ವಿಚಾರ ತುಂಬಾ ಸೂಕ್ಷ್ಮವಾಗಿರುವುದರಿಂದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಹೊಸ ಸಾಕ್ಷ್ಯವೊಂದು ಬೆಳಕಿಗೆ ಬಂದಿದ್ದು, ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತೇವೆ ಎಂದು ಗಿರಿಜೇಶ್​ ಕುಮಾರ್​ ಭರವಸೆ ನೀಡಿದ್ದಾರೆ.(ಏಜೆನ್ಸೀಸ್​)
ಒಂದೇ ಒಂದು ಮತ ಪಡೆದ ತಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದು ಹೀಗೆ..

ಇನ್ಮುಂದೆ ಸಿನಿಮಾ ಪೈರಸಿ ಮಾಡುವವರಿಗೆ ಕಾದಿದೆ ಬಹು ದೊಡ್ಡ ಶಾಕ್​: ಟೆಲಿಗ್ರಾಂ ಮೇಲೆ ಖಾಕಿ ಕಣ್ಣು

ಮೂರನೇ ವಿಶ್ವಯುದ್ಧಕ್ಕೆ ಏಲಿಯನ್​ಗಳ ತಯಾರಿ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುಎಸ್​ ಮಾಜಿ ಸೇನಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
