ಸಂಭಲ್​​:ಹಿಂದು ದೇವರ ಚಿತ್ರವಿರುವ ಪೇಪರ್​ನಲ್ಲಿ ಮಾಂಸವನ್ನು ಪ್ಯಾಕಿಂಗ್ ಮಾಡಿಕೊಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಅನ್ಯಧರ್ಮದ ಚಿಕನ್​ ಮಾರಾಟಗಾರನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಸಂಭಲ್​ನಲ್ಲಿ ನಡೆದಿದೆ. ​
ಈ ಘಟನೆ ಭಾನುವಾರ ನಡೆದಿದೆ. ಬಂಧಿತ ಆರೋಪಿಯನ್ನು ತಾಲಿಬ್​ ಹುಸೇನ್​ ಎಂದು ಗುರುತಿಸಲಾಗಿದೆ. ಈತ ಹಿಂದು ದೇವರ ಚಿತ್ರವಿರುವ ಪೇಪರ್​ನಲ್ಲಿ ಮಾಂಸದ ಪ್ಯಾಕಿಂಗ್​ ಮಾಡಿ ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವು ಮಂದಿ ದೂರು ನೀಡಿದ ಬಳಿಕ ಆತನನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
https://twitter.com/ivishalkaushik/status/1543943882131394560?s=20&t=oFFO33pCKYfSvzGfmHGcBA
ದೂರು ಸ್ವೀಕರಿಸಿದ ಬಳಿಕ ಪೊಲೀಸರು ಹುಸೇನ್​ ಶಾಪ್​ಗೆ ತೆರಳಿದ್ದಾರೆ. ಈ ವೇಳೆ ಆರೋಪಿ ಹುಸೇನ್​ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆಗೆ ಮುಂದಾಗಿದ್ದಾನೆ ಎಂದು ಪೊಲೀಸರು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.
ತಾಲಿಬ್​​​​ ಹುಸೇನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ನಿವಾಸದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಮೂಲಕ ಆಕ್ರೋಶಗೊಳಿಸುವ ಉದ್ದೇಶ) ಮತ್ತು 307 (ಕೊಲೆಯ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
VIDEO| ಕಾರಿನ ಒಳಗೆ ಗನ್ ಹಿಡಿದ ಕೇಕೆ ಹಾಕಿದ ಮೂಸೆವಾಲಾ ಹಂತಕರು: ಎರಡು ವಿಡಿಯೋ ವೈರಲ್​​

ಅಮೆರಿಕ ಸ್ವಾತಂತ್ರ್ಯ ದಿನದ ಪರೇಡ್​ ವೇಳೆ ಗುಂಡಿನ ದಾಳಿ: 6 ಮಂದಿ ದುರ್ಮರಣ, 24 ಮಂದಿ ಸ್ಥಿತಿ ಗಂಭೀರ

ಶಾಸಕ ಜಮೀರ್​ಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: 5 ಕಡೆಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡದಿಂದ ದಾಳಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 5 =
Remember me
