ಮುಂಬೈ:ಪಾರ್ಕ್​ ಮಾಡಿದ್ದ ಕಾರನ್ನು ಕೆಲವೇ ಸೆಕೆಂಡ್​ಗಳಲ್ಲಿ ಸಿಂಕ್​ಹೋಲ್ ನುಂಗಿದ ಘಟನೆ ವಾಣಿಜ್ಯ ನಗರಿ ಮುಂಬೈನ ವಸತಿ ಸಂಕೀರ್ಣದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ನಿರ್ಮಾಣವಾದ ಸಿಂಕ್​ಹೋಲ್​ನಿಂದ ಅವಘಡ ಸಂಭವಿಸಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಅಂದಹಾಗೆ ಈ ವಿಚಿತ್ರ ಘಟನೆ ಮುಂಬೈನ ಘಾಟ್ಕೋಪರ್​ ಏರಿಯಾದಲ್ಲಿ ನಡೆದಿದೆ. ವಿಡಿಯೋದಲ್ಲಿರುವಂತೆ ಕಾರಿನ ಬಾನೆಟ್​ ಮತ್ತು ಮುಂದಿನ ಚಕ್ರಗಳನ್ನು ಮೊದಲು ನುಂಗಿದ ಸಿಂಕ್​ ಹೋಲ್​ ನಂತರ ಇಡೀ ಕಾರನ್ನು ತನ್ನೊಳಗೆ ಸೆಳೆದುಕೊಳ್ಳುತ್ತದೆ.
ಸಿಂಕ್​ ಹೋಲ್​ಗೆ ಆಹುತಿಯಾದ ಕಾರಿನ ಎಡ ಹಾಗೂ ಬಲದಲ್ಲಿ ಒಂದೊಂದು ಕಾರುಗಳಿದ್ದವು. ಆದರೆ, ಅವುಗಳಿಗೆ ಯಾವುದೇ ಹಾನಿಯಾಗಿಲ್ಲ. ಇದೀಗ ವಿಡಿಯೋ ಜಾಲತಾಣದಲ್ಲಿ ಗಿರಕಿ ಹೊಡೆಯುತ್ತಿದ್ದು, ನೆಟ್ಟಿಗರು ಭಾರೀ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ.
ಮುಂಬೈ: ಪಾರ್ಕ್​ ಮಾಡಿದ್ದ ಕಾರನ್ನು ಕೆಲವೇ ಸೆಕೆಂಡ್​ಗಳಲ್ಲಿ ಸಿಂಕ್​ಹೋಲ್ ನುಂಗಿದ ಘಟನೆ ವಾಣಿಜ್ಯ ನಗರಿ ಮುಂಬೈನ ವಸತಿ ಸಂಕೀರ್ಣದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ನಿರ್ಮಾಣವಾದ ಸಿಂಕ್​ಹೋಲ್​ನಿಂದ ಅವಘಡ ಸಂಭವಿಸಿದೆ.#MansoonRain#Car#Sinkhole#Mumbai#ParkingLot#HeavyRainpic.twitter.com/0DxtF8J3eb
— Vijayavani (@VVani4U)June 13, 2021

ಮಹಾರಾಷ್ಟ್ರ ಕರಾವಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಸಮುದ್ರಕ್ಕೆ ಹೊಂದಿಕೊಂಡಿರುವ ಮುಂಬೈ ನಗರದಲ್ಲಿ ಮುಂಗಾರು ಅಬ್ಬರಿಸುತ್ತಿದೆ. ಹೀಗಾಗಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ.
ವೀಕೆಂಡ್​ನಲ್ಲಿ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೊದಲೇ ಎಚ್ಚರಿಕೆ ನೀಡಿದೆ. ಶನಿವಾರ ಆರೆಂಜ್​ ಅಲರ್ಟ್ ಹಾಗೂ ಭಾನುವಾರ ರೆಡ್​ ಅಲರ್ಟ್​​ ಘೋಷಿಸಲಾಗಿದೆ. ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ನಗರದಲ್ಲಿ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.(ಏಜೆನ್ಸೀಸ್​)
ಎಸ್​ಐ-ಮಹಿಳಾ ಕಾನ್ಸ್​ಟೇಬಲ್​ ನಡುವಿನ ಅನೈತಿಕ ಸಂಬಂಧಕ್ಕೆ ಅಮಾಯಕ ವ್ಯಕ್ತಿ ಬಲಿ!

ಬೈಕ್ ಅಪಘಾತದಲ್ಲಿ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ; ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಸಂಚಾರ ನಿಯಮವನ್ನೇ ಮರೆತ ‘ಸಂಚಾರಿ ವಿಜಯ್’!; ಕಂಟಕವಾಯ್ತು ಹೆಲ್ಮೆಟ್ ಇಲ್ಲದ ಪ್ರಯಾಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
