ಪಟನಾ:ಸರ್ಕಾರಿ ಆಸ್ಪತ್ರೆಯ ಕಳಪೆ ನಿರ್ವಹಣೆಯನ್ನು ಮೊಬೈಲ್​ನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ರೂಮಿನಲ್ಲಿ ಕೂಡಿ ಹಾಕಿ, ಸ್ಟಾಫ್​ ನರ್ಸ್​ಗಳಿಬ್ಬರು ಹಲ್ಲೆ ಮಾಡಿರುವ ಘಟನೆ ಬಿಹಾರದ ಆಸ್ಪತ್ರೆಯೊಂದರಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಈ ಘಟನೆ ಬಿಹಾರ ಸರಣ್​ ಜಿಲ್ಲೆಯಲ್ಲಿರುವ ಛಪ್ರಾ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವಿಡಿಯೋದಲ್ಲಿ ನರ್ಸ್​ ಒಬ್ಬರು ದೊಣ್ಣೆಯನ್ನು ಹಿಡಿದು ಯುವಕರಿಗೆ ಬಾರಿಸುತ್ತಿರುವುದು ಮತ್ತು ಇನ್ನೊಬ್ಬ ನರ್ಸ್​ ಆಕೆಯ ಸಹಾಯ ಮಾಡುತ್ತಿರುವ ದೃಶ್ಯವಿದೆ. ಬಿಟ್ಟು ಬಿಡಿ ಎಂದು ಯುವಕರು ಕೇಳಿಕೊಂಡರು ನಿರ್ದಾಕ್ಷಿಣ್ಯವಾಗಿ ಇಬ್ಬರ ಮೇಲೆ ನರ್ಸ್​ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಕಳಪೆ ನಿರ್ವಹಣೆಯನ್ನು ಚಿತ್ರೀಕರಿಸುತ್ತಿದ್ದ ಯುವಕರನ್ನು ನರ್ಸ್ ರೂಮಿನಲ್ಲಿ ಕೂಡಿ ಹಾಕಿ ಥಳಿಸಿದ್ದಾರೆಂದು ವರದಿಯಾಗಿದೆ. ವರದಿಗಳ ಪ್ರಕಾರ, ಯುವಕರು ವೈದ್ಯಕೀಯ ಪ್ರಮಾಣಪತ್ರವನ್ನು ಪಡೆಯಲು ಆಸ್ಪತ್ರೆಗೆ ಬಂದಿದ್ದರು. ಆದರೆ, ಆಸ್ಪತ್ರೆಯಲ್ಲಿನ ಅಸಮರ್ಥತೆಯನ್ನು ಕಂಡು, ಅದನ್ನು ಚಿತ್ರೀಕರಿಸಲು ಪ್ರಾರಂಭಿಸಿದರು. ಈ ವೇಳೆ ಯುವಕರನ್ನು ಕಂಡ ನರ್ಸ್​, ಇಬ್ಬರನ್ನು ರೂಮಿನಲ್ಲಿ ಬಂಧಿಸಿ, ಥಳಿಸಿದ್ದಾರೆ. ಅಲ್ಲದೆ, ಯುವಕರಿಗೆ ಛೀಮಾರಿ ಹಾಕಿದ್ದು, ಇಲ್ಲಿ ವಿಡಿಯೋ ಮಾಡುವ ಬದಲಿಗೆ ನಿಮ್ಮ ತಾಯಿ ಮತ್ತು ಸಹೋದರಿಯನ್ನು ಚಿತ್ರೀಕರಿಸಿ ಎಂದು ನಿಂದಿಸಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ. ಇದರ ಜೊತೆಗೆ ಆಸ್ಪತ್ರೆಯ ಸಿಬ್ಬಂದಿ ಕೂಡ ವಿಡಿಯೋ ಡಿಲೀಟ್ ಮಾಡುವಂತೆ ಒತ್ತಡ ಹೇರಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ನರ್ಸ್​ಗಳ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.(ಏಜೆನ್ಸೀಸ್​)
ವೈದ್ಯರ ಸೋಗಿನಲ್ಲಿ ರೋಗಿಗಳಿಗೆ ಚಿಕಿತ್ಸೆ: ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲ್ಯಾಬ್ ಟೆಕ್ನಿಷಿಯನ್‌

ನನ್ನ ಬಟ್ಟೆ ಹರಿಯಿತು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಕಹಿ ಘಟನೆ ವಿರುದ್ಧ ನಟಿ ಅನಸೂಯ ಆಕ್ರೋಶ

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಗೆ ತೀವ್ರ ಪೈಪೋಟಿ: ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದೆ ಹುಡುಕಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + fourteen =
Remember me
