ಚೆನ್ನೈ:ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿರುವ ಈ ವಿಡಿಯೋವನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್​ ಮಾಡಿದ್ದಾನೆಂದು ತಿಳಿದುಬಂದಿದೆ. ಹುಡುಗಿಯರು ಮತ್ತು ಹುಡುಗರ ಗುಂಪೊಂದು ಶಾಲಾ ಸಮವಸ್ತ್ರದಲ್ಲೇ ಬಸ್​ನಲ್ಲಿ ಬಿಯರ್​ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎಲ್ಲ ವಿದ್ಯಾರ್ಥಿಗಳು ಚೆಂಗಲ್ಪಟ್ಟು ಸರ್ಕಾರಿ ಶಾಲೆಯವರು ಎಂದು ನಂಬಲಾಗಿದೆ.
ಆರಂಭದಲ್ಲಿ ಇದನ್ನು ಹಳೇ ವಿಡಿಯೋ ಎಂದು ನಂಬಲಾಗಿತ್ತು. ಆದರೆ, ಈ ಘಟನೆ ಕಳೆದ ಮಂಗಳವಾರ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ತಿರುಕಝುಕುಂದ್ರಂನಿಂದ ತಾಚೂರ್‌ಗೆ ತೆರಳುತ್ತಿದ್ದ ಬಸ್‌ನಲ್ಲಿದ್ದರು ಎಂದು ತಿಳಿದುಬಂದಿದೆ.
ಈ ಘಟನೆಯನ್ನು ಗಮನಿಸಿರುವ ಜಿಲ್ಲಾ ಶಿಕ್ಷಣಾಧಿಕಾರಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್​ ತನಿಖೆಯನ್ನು ಕೈಗೊಳ್ಳಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)
ಬರ್ತಡೇ ದಿನವೇ ನವವಿವಾಹಿತೆ ದುರಂತ ಸಾವು: ಹುಟ್ಟುಹಬ್ಬಕ್ಕೆ ಸಿದ್ಧತೆ ನಡೆದಿದ್ದ ಮನೆಯಲ್ಲಿ ಸೂತಕ ಛಾಯೆ

ಕಹಿ ಅನುಭವ: ಚಾಲಕನ ವಿರುದ್ಧ ಆರೋಪ ಮಾಡಿ ಉಬರ್​ ನೆರವು ಕೋರಿದ ನಟಿ ಸ್ವರಾ ಭಾಸ್ಕರ್​

ಮೋಹನಾಂಗಿಯ ಬಲೆಗೆ ಬಿದ್ದ ‘ಮಿಸ್ಟರ್​ ರಾಜಸ್ಥಾನ್’​ ವಿಲವಿಲ! ಮಾಡೋದೆಲ್ಲಾ ಮಾಡಿ ತಗ್ಲಾಕೊಂಡ ಸುಂದರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
