ಪಟನಾ:ವಾಯು ಪಡೆ, ನೌಕಾ ಪಡೆ ಹಾಗೂ ಭೂಸೇನೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ’ ಯೋಜನೆಯನ್ನು ವಿರೋಧಿಸಿ ಬಿಹಾರದಲ್ಲಿ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದೆ.
ನಿನ್ನೆ ಆರಂಭವಾದ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿಂಸೆಯು ರೂಪ ಪಡೆದುಕೊಂಡಿದೆ. ಯುವಕರ ತೀವ್ರ ಪ್ರತಿಭಟನೆಯಿಂದ ಬಿಹಾರದ ಅನೇಕ ಭಾಗಗಳಲ್ಲಿ ರೈಲು ಸೇವೆ ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಭುವಾ ರಸ್ತೆ ರೈಲು ನಿಲ್ದಾಣದಲ್ಲಿ ಇಂಟರ್​ಸಿಟಿ ಎಕ್ಸ್​ಪ್ರೆಸ್​ ರೈಲಿನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಇಟ್ಟಿದ್ದಾರೆ.
ಇಂಡಿಯನ್​​ ಆರ್ಮಿ ಲವರ್ಸ್​ ಎಂಬ ಬ್ಯಾನರ್​ ಹಿಡಿದು ಪ್ರತಿಭಟನೆ ನಡೆಸುತ್ತಿರುವ ಯುವಕರು, ಹೊರ ನೇಮಕಾತಿ ಯೋಜನೆಯನ್ನು ಕೈಬಿಡುವಂತೆ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡಬೇಕಾಯಿತು. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ ಉಂಟಾದ ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು, ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಹಳಿಗಳ ಮೇಲೆಯೇ ಕ್ಯಾಂಪ್ ಮಾಡಿದ್ದರು. ಅವರನ್ನು ಅಲ್ಲಿಂದ ಓಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ವೇಳೆ ಹಲವರು ಗಾಯಗೊಂಡಿದ್ದಾರೆ. ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಪ್ರತಿಭಟನೆ ಕೈಬಿಡುವಂತೆ ಉದ್ರಿಕ್ತ ಪ್ರತಿಭನಾಕಾರ ಬಳಿ ಪೊಲೀಸರು ಮನವಿ ಕೂಡ ಮಾಡಿದರು.
आरा स्टेशन पर उग्र छात्रों को हटाने के लिए आश्रु गैस के गोले देखिए अब दागे जा रहे हैं ⁦@ndtvindia⁩ ⁦@Anurag_Dwary⁩pic.twitter.com/s0YP3bq1Tx
— manish (@manishndtv)June 16, 2022

ಮೋದಿ ನೇತೃತ್ವದ ಆರ್ಥಿಕ ವ್ಯವಹಾರ ಕುರಿತ ಸಂಪುಟ ಉಪಸಮಿತಿ ಅಗ್ನಿಪಥ ಯೋಜನೆಗೆ ಅನುಮೋದನೆ ನೀಡಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ. ಹದಿನೇಳೂವರೆ ವರ್ಷದಿಂದ 21 ವರ್ಷದೊಳಗಿನ 46 ಸಾವಿರ ಜನರನ್ನು 4 ವರ್ಷಗಳ ಅಲ್ಪಾವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ನಾಲ್ಕು ವರ್ಷದಲ್ಲಿ ಆರು ತಿಂಗಳ ತರಬೇತಿ ಅವಧಿಯೂ ಸೇರಿದೆ. ನೇಮಕಾತಿ ಪ್ರಕ್ರಿಯು ಇಂದಿನಿಂದ ಮೂರು ತಿಂಗಳಲ್ಲಿ ಮುಗಿಯಲಿದ್ದು, 2023ರ ಜುಲೈನಲ್ಲಿ ಮೊದಲ ಬ್ಯಾಚ್ ಸೇವೆಗೆ ಸಿದ್ಧವಾಗಲಿದೆ ಎಂದು ಸಿಂಗ್ ಹೇಳಿದರು. ಅರ್ಹತೆ ಆಧಾರದಲ್ಲಿ ಪ್ರತಿ ಬ್ಯಾಚ್​ನಲ್ಲಿ ಶೇ.25ರಷ್ಟು ಯೋಧರಿಗೆ ಸೇನೆಯಲ್ಲಿ ಮುಂದುವರಿಯಲು ಅವಕಾಶ ದೊರೆಯಲಿದೆ ಮತ್ತು ಇಂಥವರು ಅಧಿಕಾರೇತರ ಶ್ರೇಣಿಯಲ್ಲಿ 15 ವರ್ಷ ಸೇವೆ ಸಲ್ಲಿಸಬಹುದು ಎಂದರು.‘
ಈ ನೇಮಕಾತಿಯಿಂದ ಸೇನೆಯ ವಾರ್ಷಿಕ ವೆಚ್ಚದಲ್ಲಿ ದೊಡ್ಡ ಉಳಿತಾಯ ಆಗಲಿದೆ. ಸೇನೆಗೆ ಸರ್ಕಾರ ನೀಡುವ ಬಜೆಟ್​ನಲ್ಲಿ ಅರ್ಧದಷ್ಟು ಭಾಗ ವೇತನ ಮತ್ತು ಪಿಂಚಣಿಗೆ ಖರ್ಚಾಗುತ್ತದೆ. ‘ಅಗ್ನಿಪಥ’ ಯೋಜನೆಯಿಂದ ದೊಡ್ಡ ಮಟ್ಟದ ಉಳಿತಾಯ ಸಾಧ್ಯವಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಆದರೆ, ಈ ಯೋಜನೆಯು ಬಿಹಾರದ ಸೇನಾ ಆಕಾಂಕ್ಷಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಯೋಜನೆ ಕೈಬಿಡಬೇಕೆಂದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಉದ್ಯೋಗ ಪರ್ವಕ್ಕೆ ಅಗ್ನಿಪಥ

ಪುರುಷರ ಜತೆ ಡೇಟಿಂಗ್​ ಮಾಡುವಂತೆ ಮಗಳಿಂದಲೇ ಬಲವಂತ! ಸಂಬಂಧದ ಗುಟ್ಟು ಬಿಚ್ಚಿಟ್ಟ ನಟಿ ಸುಚಿತ್ರಾ

ದೆಹಲಿ ಪೊಲೀಸರು ನನ್ನ ಬಟ್ಟೆ ಹರಿದು ಹಲ್ಲೆ ಮಾಡಿದ್ರು: ಸಂಸದೆಯ ವಿಡಿಯೋ ಶೇರ್​ ಮಾಡಿದ ಶಶಿ ತರೂರ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × 2 =
Remember me
