ಆಗ್ರಾ:ಕರ್ತವ್ಯದ ವೇಳೆ ಯೂನಿಫಾರ್ಮ್ ಧರಿಸಿ, ಕೈಯಲ್ಲಿ ರಿವಾಲ್ವರ್​ ಹಿಡಿದು ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ ಇನ್​​ಸ್ಟಾಗ್ರಾಂನಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿ ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿ ಅಮಾನತಾಗಿದ್ದ ಮಹಿಳಾ ಕಾನ್ಸ್​ಟೇಬಲ್​ ಇದೀಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ಅದು ಅಂಗೀಕಾರವಾಗಿದೆ.
ಲೇಡಿ ಕಾನ್ಸ್​ಟೇಬಲ್​ ಪ್ರಿಯಾಂಕಾ ಮಿಶ್ರಾ ರಿವಾಲ್ವರ್​ ಹಿಡಿದು ರಂಗ್​ಬಾಜಿ ಚಿತ್ರದ ಡೈಲಾಗ್​ಗೆ ಲಿಪ್​ ಸಿಂಕ್​ ಮಾಡಿರುವ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿದ್ದರು. ವಿಡಿಯೋದಲ್ಲಿ ಉತ್ತರ ಪ್ರದೇಶದ ಕ್ರೈಂ ಅನ್ನು ವೈಭವೀಕರಿಸುವ ಡೈಲಾಗ್​ ಅನ್ನು ಪ್ರಿಯಾಂಕಾ ಮಿಶ್ರಾ ಹೊಡೆದಿದ್ದರು. ಯಾವುದೇ ಕಾರಣವಿಲ್ಲದೆ ಹರಿಯಾಣ ಮತ್ತು ಪಂಜಾಬ್ ಕೆಟ್ಟ ಹೆಸರು ಹೊಂದಿವೆ. ಉತ್ತರ ಪ್ರದೇಶಕ್ಕೆ ಬನ್ನಿ. ರಂಗಬಾಜಿ ಏನೆಂದು ನಾವು ನಿಮಗೆ ತೋರಿಸುತ್ತೇವೆ. ಇಲ್ಲಿ 5 ವರ್ಷದೊಳಗಿನ ಮಕ್ಕಳು ಕೂಡ ಬಂದೂಕುಗಳನ್ನು ಬಳಸುತ್ತಾರೆ ಎಂದು ಡೈಲಾಗ್​ ಹೊಡೆದಿದ್ದರು.

A post shared by priyankamishra@kajal (@mishra123priyanka)

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ, ಸಿಕ್ಕಾಪಟ್ಟೆ ಟ್ರೋಲ್​ ಆಗಿದ್ದರು. ಪೊಲೀಸ್​ ಆಗಿದ್ದುಕೊಂಡು ರೌಡಿಸಂ ಬಗ್ಗೆ ಡೈಲಾಗ್​ ಹೊಡೆಯುವುದು ಎಷ್ಟು ಸರಿ? ಅದು ಯೂನಿಫಾರ್ಮ್​ ಮತ್ತು ರಿವಾಲ್ವರ್​ ಹಿಡಿದುಕೊಂಡು ರೌಡಿಸಂ ವೈಭವೀಕರಿಸಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿದ್ದವು. ವಿಡಿಯೋ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದು ಪ್ರಿಯಾಂಕಾ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಆಕೆಯ ನಡೆ ಯುಪಿ ಪೊಲೀಸ್​ ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಅಲ್ಲದೆ, ಅವರನ್ನು ಅಮಾನತಿನಲ್ಲಿಡಲಾಗಿತ್ತು.
ಪ್ರಿಯಾಂಕಾಗೆ ಸೇವಾ ರಿವಾಲ್ವರ್​ ನೀಡಲಾಗಿಲ್ಲ. ಠಾಣೆಯ ಸ್ಟೋರ್​ ರೂಮ್​ನಲ್ಲಿ ಇಡಲಾಗಿದ್ದ ರಿವಾಲ್ವರ್​ ಅನ್ನು ವಿಡಿಯೋ ಚಿತ್ರೀಕರಣ ಮಾಡಲು ಬಳಸಿಕೊಂಡಿದ್ದಾರೆ ಎಂದು ಎಸ್​ಎಸ್​ಪಿ ಈ ಹಿಂದೆಯೇ ಹೇಳಿದ್ದರು.
ಅಮಾನತಿನಲ್ಲಿದ್ದ ಪ್ರಿಯಾಂಕಾ ಮಿಶ್ರಾ ಇದೀಗ ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದು, ರಾಜೀನಾಮೆ ಅಂಗೀಕಾರವಾಗಿದೆ.(ಏಜೆನ್ಸೀಸ್​)
ತಂಗಿಯನ್ನೇ ಮದ್ವೆಯಾಗಿ ಭಾರೀ ಟೀಕೆಗೆ ಗುರಿಯಾಗಿದ್ದ ಬೈಕ್ ರೇಸರ್​ ವಿರುದ್ಧ ಮತ್ತೊಮ್ಮೆ ನೆಟ್ಟಿಗರ ಆಕ್ರೋಶ!

ರಸ್ತೆ ರಿಪೇರಿಯಾಗುವವರೆಗೆ ಮದ್ವೆಯಾಗಲ್ಲ: ದಾವಣಗೆರೆ ಶಿಕ್ಷಕಿಗೆ ಸಿಕ್ತು ಸರ್ಕಾರದ ಸ್ಪಂದನೆ

ನೀನೇಕೆ ಬಿಳಿಕೂದಲು ಮರೆಮಾಚುವುದಿಲ್ಲ? ತಂದೆಯ ಪ್ರಶ್ನೆಗೆ ಸಮೀರಾ ರೆಡ್ಡಿ ಕೊಟ್ಟ ಉತ್ತರಕ್ಕೆ ಎಲ್ಲರೂ ಫಿದಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − two =
Remember me
