ಭೋಪಾಲ್​:ಕ್ಯಾಂಡಿಗಳನ್ನು ತಿನ್ನಲು ನನ್ನಮ್ಮ ಬಿಡುತ್ತಿಲ್ಲ ಎಂದು ಪೊಲೀಸ್​ ಠಾಣೆಗೆ ತೆರಳಿ ತಾಯಿಯ ವಿರುದ್ಧವೇ ದೂರು ದಾಖಲಿಸಿ, ಭಾರಿ ಸುದ್ದಿಯಾದ ಮೂರು ವರ್ಷದ ಪುಟ್ಟ ಪೋರನಿಗೆ ಮಧ್ಯಪ್ರದೇಶದ ಸಚಿವರು ಭರ್ಜರಿ ಉಡುಗೊರೆಯೊಂದನ್ನು ನೀಡಿದ್ದಾರೆ.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್​ ಮಿಶ್ರಾ ಅವರು ಮಗು ಹಮ್ಜಾಗೆ ದೀಪಾವಳಿ ಉಡುಗೊರೆಯಾಗಿ ಸೈಕಲ್ ಗಿಫ್ಟ್​ ನೀಡಿದ್ದಾರೆ. ಅಲ್ಲದೆ, ಚಾಕೋಲೆಟ್​ ಸೇರಿದಂತೆ ಬೇಕಾದಷ್ಟು ಸಿಹಿ ತಿನಿಸುಗಳನ್ನು ಸಹ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಬುರ್ಹಾನ್​ಪುರ್​ನ ಡೆಡ್ತಲೈದಲ್ಲಿರುವ ಪೊಲೀಸ್​ ಠಾಣೆಗೆ ತೆರಳಿ, ಸಬ್​ ಇನ್ಸ್​ಪೆಕ್ಟರ್​ ಪ್ರಿಯಾಂಕಾ ನಾಯಕ್ ಅವರಿಗೆ ತಾಯಿಯ ವಿರುದ್ಧ ಮಗು ಹಮ್ಜಾ ದೂರು ನೀಡಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಗೃಹ ಸಚಿವರ ಗಮನಕ್ಕೆ ಬಂದಿತು. ಕೂಡಲೇ ಅವರು ಹಮ್ಜಾ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿ ಗಿಫ್ಟ್​ ಕಳುಹಿಸಿಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸೈಕಲ್​ ಮತ್ತು ಸಿಹಿತಿನಿಸುಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಘಟನೆ ಹಿನ್ನೆಲೆ ಏನು?ಅಮ್ಮ ನನ್ನ ಕ್ಯಾಂಡಿಗಳನ್ನು ಕದ್ದು, ನನ್ನ ಕಪಾಳಕ್ಕೆ ಬಾರಿಸಿದಳು ಎಂದು ಕುಪಿತಗೊಂಡ ಮಗು ಅಪ್ಪನ ಸಹಾಯದಿಂದ ಪೊಲೀಸ್​ ಠಾಣೆಗೆ ತೆರಳಿ ಅಮ್ಮನ ವಿರುದ್ಧವೇ ದೂರು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿಡಿಯೋದಲ್ಲಿ ಹಮ್ಜಾ, ಬುರ್ಹಾನ್​ಪುರ್​ನ ಡೆಡ್ತಲೈದಲ್ಲಿರುವ ಪೊಲೀಸ್​ ಠಾಣೆಗೆ ತೆರಳಿ, ಸಬ್​ ಇನ್ಸ್​ಪೆಕ್ಟರ್​ ಪ್ರಿಯಾಂಕಾ ನಾಯಕ್ ಅವರಿಗೆ ತನ್ನ ನೋವಿನ ಕತೆ ಹೇಳಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ನನ್ನ ಅಮ್ಮ ನನ್ನ ಕ್ಯಾಂಡಿಗಳನ್ನು ಕದ್ದಿದ್ದಾರೆ. ಆಕೆಯನ್ನು ಜೈಲಿಗೆ ಹಾಕಿ ಎಂದು ಮಗು, ಸಬ್​ ಇನ್ಸ್​ಪೆಕ್ಟರ್​ಗೆ ಹೇಳಿದೆ. ಮಗುವಿನ ಮುಗ್ಧತೆಯನ್ನು ನೋಡಿ, ನಗೆಗಡಲಲ್ಲಿ ತೇಲಿದ ಎಸ್​ಐ ಪ್ರಿಯಾಂಕಾ, ತಮ್ಮ ನಗುವನ್ನು ನಿಯಂತ್ರಿಸಲು ಪರದಾಡುತ್ತಾ, ಮಗುವಿಗೆ ಕೆಲವು ಪ್ರಶ್ನೆಗಳನ್ನು ಕೇಳಿ, ದೂರು ಬರೆದುಕೊಳ್ಳುತ್ತಿರುವಂತೆ ನಟಿಸುತ್ತಾರೆ. ಬಳಿಕ ಮಗು ಪೇಪರ್​ಗೆ ಸಹಿ ಮಾಡುತ್ತದೆ. ಆದಷ್ಟು ಬೇಗ ನಿಮ್ಮ ಅಮ್ಮನನ್ನು ಬಂಧಿಸುವುದಾಗಿ ಹೇಳಿ ಭರವಸೆ ನೀಡಿ ಕಳುಹಿಸುವುದು ವಿಡಿಯೋದಲ್ಲಿದೆ.
ಮಗುವಿನ ತಂದೆ ಈ ಬಗ್ಗೆ ಮಾತನಾಡಿದ್ದು, ಹಮ್ಜಾ ಕ್ಯಾಂಡಿಗಳನ್ನು ಕೇಳಿದಾಗ ತಾಯಿ ಮೃದುವಾಗಿ ಕೆನ್ನೆಗೆ ಬಾರಿಸಿದಳು. ಇದರ ಬೆನ್ನಲ್ಲೇ ತನ್ನ ಪೊಲೀಸ್​ ಠಾಣೆಗೆ ಕರೆದೊಯ್ಯುವಂತೆ ಹಮ್ಜಾ ಹೇಳಿದನು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ವಿಡಿಯೋ ತುಣುಕು ವೈರಲ್ ಆದ ನಂತರ, ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಮಗುವಿಗೆ ವಿಡಿಯೋ ಕರೆ ಮೂಲಕ ಮಾತನಾಡಿ, ದೀಪಾವಳಿಯಂದು ಮಗುವಿಗೆ ಚಾಕೊಲೇಟ್ ಮತ್ತು ಸೈಕಲ್ ಕಳುಹಿಸುವುದಾಗಿ ಭರವಸೆ ನೀಡಿದ್ದರು.(ಏಜೆನ್ಸೀಸ್​)
ಠಾಣೆಗೆ ತೆರಳಿ ತಾಯಿಯ ವಿರುದ್ಧವೇ ದೂರು ದಾಖಲು! 3 ವರ್ಷದ ಮಗುವಿನ ಮಾತು ಕೇಳಿ ನಗೆಗಡಲಲ್ಲಿ ತೇಲಿದ SI

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
