ಚೆನ್ನೈ:ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಸ್ಮಶಾನದಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಿಸುವ ಮೂಲಕ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಟಿಪಿ ಛತ್ರಂ ಏರಿಯಾದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್​ ಅಧಿಕಾರಿ ತಮ್ಮ ಹೆಗಲ ಮೇಲೆ ಹೊತ್ತು ನಿಂತಿರುವುದು ವಿಡಿಯೋದಲ್ಲಿದೆ. ಆಟೋ ಮುಖಾಂತರ ಸರಿಯಾದ ಸಮಯಕ್ಕೆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದು ಇನ್ಸ್​ಪೆಕ್ಟರ್​ ರಾಜೇಶ್ವರಿ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಗುರುವಾರ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ನಡುವೆ ಸ್ಮಶಾನದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದ. ಇದೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇನ್ಸ್​ಪೆಕ್ಟರ್​ ರಾಜೇಶ್ವರಿ ಅವರಿಗೆ ಈ ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ತಮಿಳುನಾಡಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಗ್ಮೋರ್ ಮತ್ತು ಪೆರಂಬೂರ್​ ಸೇರಿದಂತೆ ಹಲವು ಕಡೆ ಮರಗಳು ಧರಶಾಹಿಯಾಗಿದ್ದು, ವರುಣನ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ.
ಶನಿವಾರದಿಂದ ಈಚೆಗೆ 12 ಮಂದಿ ಮಳೆ ಕಾರಣದಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟಿರುವುದಾಗಿ ತಮಿಳುನಾಡಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್​ ಜಯಂತ್​ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಸಮುದ್ರ ತೀರಕ್ಕೆ ಹೊಂದಿಕೊಂಡಿರುವ ಚೆನ್ನೈನಲ್ಲಿ ವರುಣ ಅಬ್ಬರಿಸುತ್ತಿದ್ದು ನಗರದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.(ಏಜೆನ್ಸೀಸ್​)
ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ; ಸರ್ಕಾರಿ ಅಧಿಕಾರಿ ಜೈಲಿಗೆ

ಇದರಲ್ಲಿ ಕರ್ನಾಟಕ ಮಾದರಿಯಾಗಲಿ ಎಂದರಂತೆ ಮೋದಿ! ಪ್ರಧಾನಿ ಜತೆಗಿನ ಮಾತುಕತೆ ವಿವರ ಬಿಚ್ಚಿಟ್ಟ ಸಿಎಂ

ನಾಡು ಕಂಡ ಧೀರೆ, ವೀರವನಿತೆ ಓಬವ್ವನ ಜಯಂತಿಗೆ ಪ್ರಧಾನಿಯಿಂದ ಕನ್ನಡದಲ್ಲಿ ಶುಭಾಶಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
