ಕೊಯಿಕ್ಕೋಡ್​:ದೇಶದಲ್ಲೇ ವಿನೂತನ ಮದುವೆ ಸಂಭ್ರಮಕ್ಕೆ ದೇವರ ನಾಡು ಕೇರಳ ಸಾಕ್ಷಿಯಾಗಿದೆ. ಸೆ.4ರಂದು ದೇಶದ ಅತಿ ಕಿರಿಯ ಮೇಯರ್ ಆರ್ಯಾ ರಾಜೇಂದ್ರನ್ ಹಾಗೂ ಕೇರಳದ ಅತಿ ಕಿರಿಯ ಶಾಸಕ ಕೆ.ಎಂ. ಸಚಿನ್ ದೇವ್​​​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಿರುವನಂತಪುರದ ಎಕೆಜಿ ಹಾಲ್​ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆದ ಸರಳ ಮದುವೆ ಸಮಾರಂಭದಲ್ಲಿ ಇಬ್ಬರು ಸಪ್ತಪದಿ ತುಳಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್​, ಸಚಿವರು, ಪಕ್ಷದ ಕಾರ್ಯಕರ್ತರು, ಬಂಧು-ಬಳಗ ಹಾಗೂ ಸ್ನೇಹ ಬಳಗ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಸರಳವಾಗಿ ಮದುವೆ ಆಗುವುದಾಗಿ ಆಹ್ವಾನ ಪತ್ರಿಕೆಯಲ್ಲಿ ಮೊದಲೇ ಇಬ್ಬರು ಉಲ್ಲೇಖಿಸಿದ್ದರು. ಸೆ.6ರಂದು ಮದುವೆ ಆರತಕ್ಷತೆ ಕೋಯಿಕ್ಕೋಡ್​ನ ಠಾಗೋರ್​ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ.

ತಿರುವನಂತಪುರದ ಮೇಯರ್​ ಆರ್ಯಾ ರಾಜೇಂದ್ರನ್ (21) ಹಾಗೂ ಬಲುಸ್ಸೆರಿ ಕ್ಷೇತ್ರದ ಶಾಸಕ ಕೆ.ಎಂ. ಸಚಿನ್ ದೇವ್​​​ (28) ಕಳೆದ ಮಾರ್ಚ್​ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಯಿತು. ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಭಾರತೀಯ ಮಕ್ಕಳ ಸಂಘಟನೆಯ ವಿಭಾಗ ಬಾಲಸಂಗಮದಿಂದಲೂ ಇಬ್ಬರು ಪರಸ್ಪರ ಪರಿಚಿತರಾಗಿದ್ದಾರೆ. ಸಚಿನ್​ ಕೇರಳ ವಿಧಾನಸಭೆಯ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ಇನ್ನೊಂದೆಡೆ ಆರ್ಯಾ ರಾಜೇಂದ್ರನ್ ದೇಶದ ಕಿರಿಯ ಮೇಯರ್​ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಎಸ್​ಎಫ್​ಐ ಸಂಘಟನೆಯ ಅಖಿಲ ಭಾರತೀಯ ಜಂಟಿ ಕಾರ್ಯದರ್ಶಿಯಾಗಿರುವ ಶಾಸಕ ಸಚಿನ್​ ದೇವ್, ಕೊಯಿಕ್ಕೋಡ್​ನ ನೆಲ್ಲಿಕೋಡ್​ ಮೂಲದವರು. ಎಸ್​ಎಫ್​ಐನ ರಾಜ್ಯ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ಬಲುಸ್ಸೆರಿ ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಿದ್ದರು. ಸಚಿನ್​ ಅವರು ಕೊಯಿಕ್ಕೂಡ್​ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂಗ್ಲಿಷ್​ ಸಾಹಿತ್ಯದಲ್ಲಿ ಪದವಿ ಶಿಕ್ಷಣ ಮತ್ತು ಕೊಯಿಕ್ಕೋಡ್​ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದಿದ್ದಾರೆ.

ಆರ್ಯಾ ರಾಜೇಂದ್ರನ್​ ಅವರು 21ನೇ ವಯಸ್ಸಿನಲ್ಲೇ ತಿರುವನಂತಪುರದ ಆಲ್ ಸೇಂಟ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವಾಗಲೇ ತಿರುವನಂತಪುರದ ಮೇಯರ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.(ಏಜೆನ್ಸೀಸ್​)
ಕೇವಲ 2 ರೂಪಾಯಿಗೆ ಭರ್ಜರಿ ನಾನ್​ ವೆಜ್​ ಊಟ! ಚಿಕನ್​, ಮೊಟ್ಟೆಗಾಗಿ ಮುಗಿಬಿದ್ದ ಜನರು

ಬಾಲಿವುಡ್​​ ಟಾರ್ಗೆಟ್​ ಆಗಿರುವುದೇಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಟಿ ಸ್ವರಾ ಭಾಸ್ಕರ್​!

ಹಳಿ ಮೇಲೆ ನಿಂತು Instagram ರೀಲ್ಸ್​ ಮಾಡುವಾಗ ರೈಲು ಡಿಕ್ಕಿ: ಹಾರಿ ಹೋಗಿ ಬಿದ್ದ ವಿದ್ಯಾರ್ಥಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
