ನವದೆಹಲಿ: ಪ್ರಾನ್ಸ್​ನಿಂದ ಆಗಮಿಸಿರುವ ಅತ್ಯಾಧುನಿಕ ಐದು ರಫೇಲ್ ಜೆಟ್​ಗಳು ಸೆ.10ಕ್ಕೆ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಚಾಲನೆ ನೀಡಲಿದ್ದಾರೆ.
ಫ್ರಾನ್ಸ್ ರಕ್ಷಣಾ ಸಚಿವ ಫ್ಲೊರೆನ್ಸ್ ಪಾರ್ಲೆ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಈ ಮೊದಲು ಕೆಲ ವರದಿಗಳು ತಿಳಿಸಿದ್ದವು. ಈ ರಫೇಲ್ ಜೆಟ್​ಗಳನ್ನು ಲಡಾಖ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್​ಎಸಿ) ಬಳಿ ನಿಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಕಳೆದ ಜುಲೈ 29ರಂದು ಫ್ರಾನ್ಸ್​ನಿಂದ ಈ ಜೆಟ್​ಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿವೆ.
ಇದನ್ನೂ ಓದಿ:ಸಾಯುವುದಕ್ಕೆ ಮುನ್ನ ಸುಶಾಂತ್ ಗೂಗಲ್​ನಲ್ಲಿ ಏನು ಹುಡುಕುತ್ತಿದ್ದರು?
59 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 36 ರಫೇಲ್ ಜೆಟ್​ಗಳನ್ನು ಭಾರತ ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. 2021ರ ಅಂತ್ಯದ ವೇಳೆಗೆ ಎಲ್ಲ 36 ಯುದ್ಧ ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. (ಏಜೆನ್ಸೀಸ್)
ಫ್ಯೂಯೆಲ್ ಇಕಾನಮಿಯ ಸ್ಟೈಲಿಶ್​ ಕಿಯಾ ಸೋನೆಟ್​ ಬುಕ್ಕಿಂಗ್ ಶುರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
