ರಾಯ್​ಪುರ:ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಛತ್ತೀಸ್​ಗಢದಲ್ಲಿ ತಮ್ಮ​ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನತೆಗೆ 10 ಲಕ್ಷ ರೂಪಾಯಿ ವರೆಗಿನ ಉಚಿತ ಚಿಕಿತ್ಸಾ ಸೌಲಭ್ಯವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಘೋಷಿಸಿದ್ದಾರೆ.
ಛತ್ತೀಸ್​ಗಢದ ರಾಜನಂದಗಾಂವ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೃಷಿ ಭೂಮಿ ರಹಿತ ಕಾರ್ಮಿಕರಿಗೆ ವರ್ಷಕ್ಕೆ 10 ಸಾವಿರ ರೂಪಾಯಿ ಹಣವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜಅತಿ ಗಣತಿ ನಡೆಸಲಾಗುವುದು. ರಾಜ್ಯದ ಜನತೆಗೆ 10 ಲಕ್ಷ ರೂಪಾಯಿ ವರೆಗಿನ ಉಚಿತ ಚಿಕಿತ್ಸಾ ಸೌಲಭ್ಯವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು. ಕಾಂಗ್ರೆಸ್​ ಸರ್ಕಾರ ಬಡವರು, ದಲಿತರು, ರೈತರು, ಕಾರ್ಮಿಕರು, ಹಿಂದುಳಿದ ವರ್ಗಗಳು ಹಾಗೂ ಆದಿವಾಸಿ ಜನತೆಯೆ ಧ್ವನಿಯನ್ನು ಕೇಳುತ್ತದೆ.
किसान, मजदूर और छोटे व्यापारी इस देश की रीढ़ हैं, ये देश को चलाते हैं इसलिए हम इन्हें राहत देते हैं, इनके कर्ज माफ करते हैं – श्री@RahulGandhi#कांग्रेस_फिर_निभाएगीpic.twitter.com/emxcHe4pvo
ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವುದು ಎರಡು ಪಕ್ಷಗಳ ನಡುವೆ; ಹೊಸ ಸಂಚಲನ ಸೃಷ್ಟಿಸಿದ ದಿಗ್ವಿಜಯ್​ ಸಿಂಗ್ ಹೇಳಿಕೆ
ನೀವು ಕಾಂಗ್ರೆಸ್​ ಬಗ್ಗೆ ಮಾತನಾಡಬೇಕಿಲ್ಲ. ನಿಮ್ಮ ಹೃದಯದ ಮಾತು ನಮಗೆ ಕೇಳಿಸುತ್ತದೆ. ನಾವು ಭೇಟಿ ನೀಡಿದ ಪ್ರತಿಯೊಂದು ಸ್ಥಳದಲ್ಲೂ ಜನ ಕಾಂಗ್ರೆಸ್​ ರೈತರು ಹಾಗೂ ಬಡವರಿಗಾಗಿ ಜಾರಿ ಮಾಡಿದ ಯೋಜನೆಗಳನ್ನು ಈಗಲೂ ಸ್ಮರಿಸುತ್ತಾರೆ. ಅದೇ ರೀತಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೊದಲ ದಿನವೇ ಜಾತಿ ಗಣತಿಗೆ ಆದೇಶಿಸುತ್ತದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಛತ್ತೀಸ್​ಗಢದಲ್ಲಿ ಭರವಸೆ ನೀಡಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 90 ಸದಸ್ಯಬಲದ ಛತ್ತೀಸ್​ಗಢ ವಿಧಾನಸಭೆಗೆ ನವೆಂಬರ್ 07 ಹಾಗೂ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
