ನವದೆಹಲಿ:ಕಾಂಗ್ರೆಸ್ ಪಕ್ಷ ಈ ಬಾರಿ ಅಮೇಠಿಯಲ್ಲಿ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ಕೊಟ್ಟಿದೆ. ರಾಹುಲ್ ಗಾಂಧಿ ಅವರು ತಮ್ಮ ತಾಯಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನೆಲ್ಲೇ ಕಾಂಗ್ರೆಸ್ ಪಕ್ಷದ ಈ ನಿರ್ಧಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ವಿಂಡೀಸ್‌ ಕ್ರಿಕೆಟಿಗ ಡೆವೊನ್ ಥಾಮಸ್​ಗೆ ವಿರುದ್ಧ 5 ವರ್ಷಗಳ ನಿಷೇಧ ಹೇರಿದ ಐಸಿಸಿ!
ಕಾಂಗ್ರೆಸ್​ ಪಕ್ಷದ ಈ ಹಿಂದಿನ ಭದ್ರಕೋಟೆಯಾಗಿರುವ ಅಮೇಠಿಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನವೇ ಸೋಲನ್ನು ಒಪ್ಪಿಕೊಂಡಿದೆ. ಗಾಂಧಿ ಕುಟುಂಬದ ಒಬ್ಬರು ಕೂಡ ಈ ಕ್ಷೇತ್ರದಿಂದ ಸ್ಪರ್ಧೆ ಮಾಡದಿರುವುದು ಆಶ್ಚರ್ಯ ತಂದಿದ್ದು ಅವರಿಗೆ ಸೋಲುವ ಸೂಚನೆ ಸಿಕ್ಕಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.
ಅಮೇಠಿ ಕ್ಷೇತ್ರದ ಮತದಾರರು ಮೋದಿ ಸರ್ಕಾರದ ಅಭಿವೃದ್ಧಿಯನ್ನು ನೋಡಿದ್ದಾರೆ, ಕಳೆದ 50 ವರ್ಷಗಳಲ್ಲಿ ಇದು ಏಕೆ ಆಗಲಿಲ್ಲ ಎಂದು ಅಶ್ಚರ್ಯ ವ್ಯಕ್ತಪಡಿಸಿದ ಅವರು, ಈ ಪ್ರದೇಶದಲ್ಲಿ ಗಾಂಧಿ ಕುಟುಂಬದಲ್ಲಿ ಏಕೆ ಹೆಚ್ಚಿನ ಹಾನಿಯನ್ನುಂಟು ಮಾಡಿದರು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಇರಾನಿ ಕೇಳಿದರು.
ಕೇರಳದ ವಯನಾಡಿದಲ್ಲಿ ಲೋಕಸಭೆ ಚುನಾವಣೆ ನಂತರ ರಾಹುಲ್ ಗಾಂಧಿ ಹೊಸ ಕ್ಷೇತ್ರ ನೋಡಿಕೊಳ್ಳಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಇಂದು ಅದು ಸಂಭವಿಸುವುದನ್ನು ನೀವು ನೋಡುತ್ತಿದ್ದೀರಿ” ಎಂದು ಕೇಂದ್ರ ಸಚಿವೆ ಇರಾನಿ ಅವರು ಹೇಳಿದರು. ರಾಹುಲ್ ಕೇರಳದ ವಯನಾಡ್ ನಿಂದ ಹಾಲಿ ಸಂಸದರಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮೇ 7 ರಂದು: ಸುಪ್ರೀಂ ಕೋರ್ಟ್ ತೀರ್ಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
