ನವದೆಹಲಿ:2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಕೊಂಚ ರಿಲೀಫ್​ ನೀಡಿದೆ.
ಸಂಸತ್​ ಸ್ಥಾನದಿಂದ ಅನರ್ಹಗೊಂಡ ಬಳಿಕ ಸರ್ಕಾರಿ ಸವಲತ್ತುಗಳನ್ನು ಕಳೆದುಕೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಪಾಸ್​ಪೋರ್ಟ್​ ಪಡೆಯಲು ದೆಹಲಿ ಹೈಕೋರ್ಟ್​ ಅನುಮತಿ ನೀಡಿದೆ.
ಸಂಸದನ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್​ ತಮ್ಮ ಬಳಿ ಇದ್ದ ಡಿಪ್ಲೋಮ್ಯಾಟಿಕ್​ ಪಾಸ್​​ಪೋರ್ಟ್​ಅನ್ನು ಅರ್ಕಾರಕ್ಕೆ ಒಪ್ಪಿಸಿದ ನಂತರ ನಿರಾಪೇಕ್ಷಣಾ ಪ್ರಮಾಣಪತ್ರ(NOC) ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆಯನ್ನು ನಡೆಸಿದ ವೈಭವ್​ ಮೆಹ್ತಾ ಅವರಿದ್ದ ಏಕ ಸದಸ್ಯ ಪೀಠವು ರಾಹುಲ್​ ಗಾಂಧಿ ಅವರ ಮನವಿಯನ್ನು ಪುರಸ್ಕರಿಸಿ 10 ವರ್ಷದ ಬದಲಿಗೆ ಮೂರು ವರ್ಷಗಳ ಸಾಮಾನ್ಯ ಪಾಸ್‌ಪೋರ್ಟ್‌ ಹೊಂದಲು ಅನುಮತಿ ನೀಡಿದೆ.
ರಾಹುಲ್​ ಗಾಂಧಿ ತಮ್ಮ ಬಳಿ ಪಾಸ್​ಪೋರ್ಟ್​ ಹೊಂದಲು ನ್ಯಾಯಾಲಯದ ಅನುಮತಿ ಬೇಕಿತ್ತು ಏಕೆಂದರೆ ನ್ಯಾಷನಲ್​ ಹೆರಾಲ್ಡ್​, ಅಕ್ರಮ ಹಣ ವರ್ಗಾವಣೆ, ಅನುದಾನ ದುರ್ಬಳಕೆ, ಸೇರಿದಂತೆ ಅನೇಕ ಪ್ರಕರಣಗಳ ವಿಚಾರಣೆಯನ್ನು ರಾಹುಲ್​ ಎದುರಿಸುತ್ತಿದ್ದಾರೆ.
ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಿರಾಪೇಕ್ಷಣಾ ಪ್ರಮಾಣಪತ್ರ(NOC) ನೀಡಿರುವ ಕುರಿತು ಶುಕ್ರವಾರದೊಳಗೆ ಉತ್ತರಿಸುವಂತೆ ನ್ಯಾಯಾಲಯ ಸ್ವಾಮಿ ಅವರಿಗೆ ಸೂಚಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − 9 =
Remember me
