ಚೆನ್ನೈ: ಪಂಚರಾಜ್ಯಗಳ ಚುನಾವಣೆ ಘೋಷಣೆಯಾದಾಗಿನಿಂದ ಅಥವಾ ಅದಕ್ಕೂ ಕೆಲ ದಿನಗಳ ಮೊದಲಿನಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇರಳ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭರ್ಜರಿ ಹವಾ ಸೃಷ್ಟಿ ಮಾಡಿದ್ದಾರೆ.
ಮೊನ್ನೆಯಷ್ಟೇ ಕೇರಳದಲ್ಲಿ ಮೀನುಗಾರರ ಜೊತೆ ಬೋಟ್​ನಲ್ಲಿ ಹೋಗುವಾಗ ಆಳಸಮುದ್ರಕ್ಕೆ ಜಿಗಿದು ಈಜಾಡಿದ್ದರು. ಇದು ಎಲ್ಲರನ್ನು ನಿಬ್ಬೆರಗಾಗಿಸಿತ್ತು. ಈಗ ತಮಿಳುನಾಡು ಪ್ರವಾಸದಲ್ಲಿರುವ ಅವರು ಅಲ್ಲಿನ ಶಾಲಾ ಮಕ್ಕಳ ಜೊತೆ ಡ್ಯಾನ್ಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ತಮಿಳುನಾಡಿನ ಮುಳುಗುಮೂಡಿನ ಸೇಂಟ್ ಜೋಸೆಪ್ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ವಿದ್ಯಾರ್ಥಿನಿಯರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರಿಗೆ ಪಕ್ಷದ ದಿನೇಶ್ ಗುಂಡೂರಾವ್ ಸೇರಿದಂತೆ ಅಲ್ಲಿ ಕಾಂಗ್ರೆಸ್ ಮುಖಂಡರು ಜೊತೆಗೂಡಿದ್ದಾರೆ. ರಾಹುಲ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
#WATCH: Congress leader Rahul Gandhi dances with students of St. Joseph's Matriculation Hr. Sec. School in Mulagumoodubn, Tamil Nadu during an interaction with thempic.twitter.com/RaSDpuXTqQ
— ANI (@ANI)March 1, 2021

ಕನ್ಯಾಕುಮಾರಿಯಲ್ಲಿ ಆಯೋಜಿಸಿದ್ದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ, ರಾಹುಲ್ ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ಕಿಡಿಕಾರಿದರು. ಪ್ರಧಾನಿ ಮೋದಿ ಮುಂದೆ ಕೈ ಕಟ್ಟಿ ನಿಲ್ಲುವ ಈ ಮುಖ್ಯಮಂತ್ರಿ ತಮಿಳುನಾಡಿನ ಜನರ ಪ್ರತಿನಿಧಿಯಾಗುವುದಿಲ್ಲ ಎಂದು ಹರಿಹಾಯ್ದಿದ್ದಾರೆ. ಏಪ್ರೀಲ್ 6 ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ.
ವಿದ್ಯಾರ್ಥಿನಿಯೊಂದಿಗೆ ಪುಶ್​ಅಪ್​ ಚಾಲೆಂಜ್​ನಲ್ಲಿ ರಾಹುಲ್​ ಗಾಂಧಿ! ಫಿಟ್​ ರಾಹುಲ್​ ಅದೆಷ್ಟು ಫಾಸ್ಟ್​ ಆಗಿದ್ದಾರೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eleven =
Remember me
