ನವದೆಹಲಿ:ಇತ್ತೀಚಿಗೆ ನಡೆದ ಲೋಕಸಭೆ ಅಧಿವೇಶನದಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿ ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ. ಆದೇ ರೀತಿ ಹಿಂಸಾಚಾರ ಮಾಡುವವರು ಹಿಂದೂಗಳಲ್ಲ ಎಂದು ಹೇಳಿದ್ದರು. ಈ ಭಾಷಣ ಎನ್​ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೀಗ ರಾಹುಲ್​ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರಾಖಂಡ್‌ನ ಜ್ಯೋತಿಶ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಶ್ರೀ ಪ್ರತಿಕ್ರಿಯಿಸಿದ್ದು, ರಾಹುಲ್​ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವಿಮುಕ್ತೇಶ್ವರಾನಂದ ಸ್ವಾಮೀಜಿ ರಾಹುಲ್​ ಗಾಂಧಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ನನಗೆ ಭಕ್ತರು ತಿಳಿಸಿದ ನಂತರ ನಾನು ಅವರ ಭಾಷಣದ ವಿಡಿಯೋವನ್ನು ನೋಡಿದೆ. ಭಾಷಣದಲ್ಲಿ ಅವರು ಹಿಂದೂ ಧರ್ಮದ ವಿರುದ್ಧವಾಗಿ ಮಾತನಾಡಿಲ್ಲ. ಅವರ ಹೇಳಿಕೆಯ ಆಯ್ದ ಭಾಗವನ್ನು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ರಾಹುಲ್​ ಗಾಂಧಿ ಹಿಂದೂ ಧರ್ಮದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಹೇಳಿದ್ದಾರೆ. ಅದನ್ನು ಬಿಟ್ಟು ಭಾಷಣದ ಆಯ್ದ ಭಾಗವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸೌಹಾರ್ದತೆ ಕದಡುವ ಯತ್ನ ನಡೆಯುತ್ತಿದೆ. ಈ ರೀತಿ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಉತ್ತರಾಖಂಡ್‌ನ ಜ್ಯೋತಿಶ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್​ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್​ ಮಾಡಿದೆ.
We heard Rahul Gandhi's entire speech. He is clearly saying that there is no place for violence in Hinduism.Rahul Gandhi is not saying anything contrary to Hinduism anywhere.Spreading half of Rahul Gandhi's statement is a crime.: Shankaracharya Swami Avimukteshwarananda Jipic.twitter.com/1ug2LJLtxs
ಇದನ್ನೂ ಓದಿ:ರೀಲ್ಸ್​ನಲ್ಲಿ ಗುಂಡು ಹಾರಿಸಿ ವೈರಲ್ ಆದ ಯುವಕ; ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ ಪೊಲೀಸ್​ ಆಯುಕ್ತರು
ಜುಲೈ 01ರಂದು ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾತನಾಡಿದ ರಾಹುಲ್​ ಗಾಂಧಿ ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಳ್ಳುವವರು ಹಿಂಸಾಚಾರ ಹಾಗೂ ದ್ವೇಷದಲ್ಲಿ ಹಗಲಿರುಳು ನಿರತರಾಗಿದ್ದಾರೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ಎನ್​ಡಿಎ ಮೈತ್ರಿಕೂಟದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ ಇಡೀ ಹಿಂದೂ ಸಮಾಜವು ಹಿಂಸಾಪ್ರವೃತ್ತಿಯಿಂದ ಕೂಡಿದೆ ಎಂದು ಕರೆಯುವುದು ತುಂಬಾ ಗಂಭೀರ ವಿಷಯವಾಗಿದೆ ಎಂದು ಹೇಳುವ ಮೂಲಕ ಕಿಡಿಕಾರಿದ್ದರು. ಇದಲ್ಲದೆ ರಾಹುಲ್​ ಗಾಂಧಿ ಸದನದಲ್ಲಿ ಬಿಜೆಪಿ-ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ನಡೆಸುವಾಗ ಪ್ರಧಾನಿ ಮೋದಿ ಎರಡು ಬಾರಿ ಮಧ್ಯಪ್ರವೇಶಿಸಿ ಆಕ್ಷೇಪಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 12 =
Remember me
