ನವದೆಹಲಿ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿರುವ ಬೆನ್ನಲ್ಲೇ ರಾಜಕೀಯವಾಗಿ-ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ಎಐಸಿಸಿ ಪ್ರತಿಕ್ರಿಯಿಸಿದೆ.
ಈ ಕುರಿತು ಟ್ವೀಟ್​ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​ ಅದಾನಿ ಸಮೂಹ ಸಂಸ್ಥೆಗಳ ಹಗರಣಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ(JPC) ತನಿಖೆಯ ಬದಲಿಗೆ ರಾಹುಲ್​ ಗಾಂಧಿ ಅವರನ್ನ ಅನರ್ಹಗೊಳಿಸಲಾಗಿದೆ. ಈ ರೀತಿಯ ಕ್ರಮಗಳಿಂದ ವಿರೋಧ ಪಕ್ಷಗಳ ಧ್ವನಿಯನ್ನ ಹತ್ತಿಕ್ಕಲು ಸಾಧ್ಯವಿಲ್ಲ ಇದನ್ನ ನಾವು ರಾಜಕೀಯವಾಗಿ-ಕಾನೂನಾತ್ಮಕವಾಗಿ ಹೋರಾಟ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
We will fight this battle both legally and politically. We will not be intimidated or silenced. Instead of a JPC into the PM-linked Adani MahaMegaScam,@RahulGandhistands disqualified. Indian Democracy Om Shanti.pic.twitter.com/d8GmZjUqd5

ಸಂಸತ್​​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅವರನ್ನ ಅನರ್ಹಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್​ ಕೇಂದ್ರ ಸರ್ಕಾರದ ಈ ಕ್ರಮದಿಂದ ತಾವು ದಿಗ್ಭ್ರಮೆಗೊಂಡಿರುವುದಾಗಿ ಹೇಳಿದ್ದಾರೆ. ಈ ರೀತಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.
I’m stunned by this action and by its rapidity, within 24 hours of the court verdict and while an appeal was known to be in process. This is politics with the gloves off and it bodes ill for our democracy.pic.twitter.com/IhUVHN3b1F
ಇದನ್ನು ಓದಿ:ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಪಕ್ಷಗಳ ನಾಯಕರು ಪೊಲೀಸ್​ ವಶಕ್ಕೆ
ಇದನ್ನು ಓದಿ:SC-ST ಮೀಸಲಾತಿ ವಿಳಂಬ ಖಂಡಿಸಿ ಕಾಂಗ್ರೆಸ್​​ ನಾಯಕರಿಂದ ರಾಜಭವನ ಚಲೋ; ಪೊಲೀಸ್​​ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
