ಜಮ್ಮು:2016ರಲ್ಲಿ ಪಾಕಿಸ್ತಾನದ ಎಲ್‌ಒಸಿ ಬಳಿ ಭಯೋತ್ಪಾದಕ ಶಿಬಿರಗಳ ಮೇಲೆ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್‌ಗಳನ್ನು ಪ್ರಶ್ನಿಸಿ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ನೀಡಿದ್ದ ಹೇಳಿಕೆಯನ್ನು ರಾಹುಲ್ ಗಾಂಧಿ “ಹಾಸ್ಯಾಸ್ಪದ” ಎಂದು ಕರೆದ್ದಾರೆ. ದಿಗ್ವಿಜಯ್​ ಸಿಂಗ್​ರ ಹೇಳಿಕೆಯನ್ನು ಸಂಪೂರ್ಣವಾಗಿ ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.
ಜಮ್ಮುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ‘ದಿಗ್ವಿಜಯ ಸಿಂಗ್ ಹೇಳಿರುವುದನ್ನು ನಾನು ಒಪ್ಪುವುದಿಲ್ಲ. ನಾವು ನಮ್ಮ ಸೇನೆಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಭಾರತೀಯ ಸೇನೆ ಏನಾದರೂ ಮಾಡಿದರೆ ಸಾಕ್ಷಿ ಒದಗಿಸುವ ಅಗತ್ಯವಿಲ್ಲ. ಅವರು ಹೇಳಿದ್ದನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.
ಈ ಹಿಂದೆಯೂ ತಮ್ಮ ಹೇಳಿಕೆಗಳಿಂದಾಗಿ ಪಕ್ಷ ತೊರೆದಿರುವ ದಿಗ್ವಿಜಯ್​ ಸಿಂಗ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದಾಗ ರಾಹುಲ್​ ಗಾಂಧಿ, ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ನಂಬುವ ಪಕ್ಷ. ನಮ್ಮಲ್ಲಿ ಸರ್ವಾಧಿಕಾರಿ ಪದ್ಧತಿ ಇಲ್ಲ ಎಂದು ಅವರು ಹೇಳಿದ್ದಾರೆ. ಇನ್ನು ದಿಗ್ವಿಜಯ್​ ಸಿಂಗ್ ನೀಡಿರುವ ಹೇಳಿಕೆ ವೈಯಕ್ತಿವಾದದ್ದು. ಅದು ಪಕ್ಷದ ದೃಷ್ಟಿಕೋನವಲ್ಲ. ಎಂದು ರಾಹುಲ್ ಗಾಂಧಿ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 9 =
Remember me
