ಅಮೃತಸರ:ಹರ್ಯಾಣದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಪೂರ್ಣಗೊಳಿಸಿದ ರಾಹುಲ್ ಗಾಂಧಿ ಪಂಜಾಬ್ ರಾಜ್ಯವನ್ನು ಪ್ರವೇಶಿಸಿದ್ದಾರೆ. ಇಂದು ಮಧ್ಯಾಹ್ನ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಶ್ರೀ ಹರ್ಮಂದಿರ್ ಸಾಹಿಬ್ (ಗೋಲ್ಡನ್ ಟೆಂಪಲ್)ಗೆ ಭೇಟಿ ನೀಡಿದ್ದಾರೆ.
गुरु के द्वारे, श्री हरमंदिर साहिब पहुंच कर मानवीय मूल्यों में विश्वास और भी गहरा हो जाता है। सत श्री अकाल! 🙏pic.twitter.com/RBMq0yyjk8— Rahul Gandhi (@RahulGandhi)January 10, 2023
गुरु के द्वारे, श्री हरमंदिर साहिब पहुंच कर मानवीय मूल्यों में विश्वास और भी गहरा हो जाता है। सत श्री अकाल! 🙏pic.twitter.com/RBMq0yyjk8
ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆ ಪಂಜಾಬ್ ನಂತರ ಹಿಮಾಚಲ ಪ್ರದೇಶಕ್ಕೆ ತೆರಳಲಿದೆ. ಅಲ್ಲಿಂದ ಜನವರಿ 20ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಲಿದೆ. ಜನವರಿ 30 ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜಾರೋಹಣದೊಂದಿಗೆ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಲಿದೆ.
ಭಾರತ್ ಜೋಡೋ ಯಾತ್ರೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾಗಿ, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಉತ್ತರ ಪ್ರದೇಶ, ಹರ್ಯಾಣ ಮೂಲಕ ಇದೀಗ ಪಂಜಾಬ್ ಪ್ರವೇಶಿಸಿದೆ. ಯಾತ್ರೆಯ ಮೂಲಕ ರಾಹುಲ್ ಗಾಂಧಿ ಈಗಾಗಲೇ 2500 ಕಿ.ಮೀ. ಹೆಚ್ಚು ದೂರ ಕ್ರಮಿಸಿದ್ದಾರೆ. ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆಗೆ ಈಗಾಗಲೇ ಸಾಕಷ್ಟು ಹಿರಿಯ ರಾಜಕೀಯ ನಾಯಕರು, ನಟರು ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಭಾಗವಹಿಸಿ ಸುದ್ದಿಯಾಗಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
