ಸೂರತ್​:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಸೂರತ್​ ನ್ಯಾಯಾಲಯ 30 ದಿನಗಳ ಜಾಮೀನು ಮಂಜೂರು ಮಾಡಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಅವರು ಸೂರತ್​ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಕಾಂಗ್ರೆಸ್​​ ನಾಯಕನಿಗೆ ಜಾಮೀನು ಮಂಜೂರು ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಏಪ್ರಿಲ್​ 13ಕ್ಕೆ ಮುಂದೂಡಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಅವರ ಪದವಿ ದಾಖಲೆಗಳನ್ನು ಹೊಸ ಸಂಸತ್​ ಭವನದ ಎದುರು ಪ್ರದರ್ಶಿಸಿ: ಸಂಜಯ್​ ರಾವುತ್​
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್​ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ರಾಹುಲ್​ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್​ 23ರಂದು ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 1 =
Remember me
