ನವದೆಹಲಿ:ಸಂಸದ ರಾಹುಲ್​ ಗಾಂಧಿ ಮೊನ್ನೆಯಷ್ಟೇ ಸಂಸತ್ತಿನಲ್ಲಿ ಸಚಿವೆ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟರು ಎಂಬ ಪ್ರಕರಣ ಇನ್ನೂ ತಣ್ಣಗಾಗುವಂತೆ ಕಾಣುತ್ತಿಲ್ಲ. ಅಂದಿನಿಂದಲೂ ಚರ್ಚೆಯಲ್ಲಿರುವ ಈ ವಿಚಾರವಾಗಿ ಪರ-ವಿರೋಧ ಹೇಳಿಕೆಗಳು ಕೇಳಿ ಬರುತ್ತಲೇ ಇವೆ.
ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಕೊಟ್ಟರು ಎಂದು ಬಿಜೆಪಿಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆ ಮುಂತಾದವರು ಸ್ಪೀಕರ್​ಗೆ ದೂರು ಕೂಡ ನೀಡಿದ್ದರು. ಇದು ಅಸಭ್ಯ ವರ್ತನೆ ಎಂದು ಆರೋಪಿಸಿದ್ದ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೂ ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ಸಿಗರೂ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಇದೀಗ ಇದೇ ವಿಚಾರವಾಗಿ ರಾಹುಲ್ ಗಾಂಧಿ ಪರವಾಗಿ ಮಹಿಳೆಯೊಬ್ಬರು ಮಾತನಾಡಿ ಬೆಂಬಲ ಸೂಚಿಸಿದ್ದಾರೆ. ರಾಹುಲ್ ಪರವಾಗಿ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ವಕ್ತಾರೆ ಸಾರಿಕಾ ಪಾಸ್ವಾನ್​ ಮಾತನಾಡಿದ್ದು, ಸ್ಮೃತಿ ಇರಾನಿಗೆ ಫ್ಲೈಯಿಂಗ್​ ಕಿಸ್ಸನ್ನು ಹಿಡಿಯಲು ಯಾರು ಹೇಳಿದ್ದರು? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ ರಾಹುಲ್ ಗಾಂಧಿಯವರಿಗೆ ಹಾಲಿವುಡ್​-ಬಾಲಿವುಡ್​ನಿಂದ ಪ್ರಪೋಸಲ್ಸ್ ಬರುತ್ತಿದ್ದು, ಅವರು ಐವತ್ತು ವರ್ಷ ಪ್ರಾಯದ ಸ್ಮೃತಿ ಇರಾನಿಗೆ ಯಾಕೆ ಫ್ಲೈಯಿಂಗ್ ಕಿಸ್ ಕೊಡುತ್ತಾರೆ ಎಂದೂ ಸಾರಿಕಾ ಪಾಸ್ವಾನ್ ಪ್ರಶ್ನೆ ಮಾಡಿದ್ದಾರೆ.
ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
