ಮುಂಬೈ: ಯುನೈಟೆಡ್ ಸ್ಟೇಟ್ಸ್​​ಗೆ ತೆರಳಿರುವ ರಾಹುಲ್ ಗಾಂಧಿ ಅವರ ಭಾಷಣದ ಕುರಿತು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ರಾಹುಲ್ ಅವರನ್ನು ಕ್ರಿಕೆಟ್ ಆಟಗಾರರಾದ ವಿರಾಟ್ ಕೊಹ್ಲಿ, ಸಚಿನ್​ಗೆ ಹೋಲಿಸಿ ಮಾತನಾಡಿದ್ದಾರೆ.
ಇದನ್ನೂ ಓದಿ :ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ತಾನೇ ಬಂದು ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದೇಕೆ?
ವಿದೇಶಕ್ಕೆ ತೆರಳಿರುವ ರಾಹುಲ್ ತಮ್ಮ ಭಾಷಣದ ಮುಖೇನ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಅವರ ಭಾಷಣವನ್ನು ಅನೇಕರು ಕೇಳುತ್ತಿರುವುದು ಉತ್ತಮವಾಗಿದೆ. ಜನರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅವರ ಭಾಷಣವನ್ನು ಕೇಳಲು ಬರುತ್ತಿದ್ದಾರೆ ಎಂದು ಸಂಜಯ್ ರಾವತ್ ರಾಹುಲ್ ಅವರನ್ನು ಹೊಗಳಿದ್ದಾರೆ.

“ಅಮೇರಿಕಾದಲ್ಲಿ ತಮ್ಮ ಭಾಷಣದ ಮುಖೇನ ಅಲ್ಲಿನ ಜನರಿಂದ ಒಳ್ಳೆಯ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ರಾಹುಲ್ ಅವರು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರಂತೆ ಉತ್ತಮ ಫಾರ್ಮ್​ನಲ್ಲಿದ್ದಾರೆ. ಸಂಸದ ಸ್ಥಾನದಿಂದ ಅನರ್ಹಗೊಂಡು ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದರೂ, ಆ ಎಲ್ಲಾ ಪರಿಸ್ಥಿತಿಯನ್ನು ರಾಹುಲ್ ಚೆನ್ನಾಗಿ ನಿಭಾಯಿಸುತ್ತಿದ್ದಾರೆ” ಎಂದು ಶಿವಸೇನೆ ನಾಯಕ ಹೇಳಿದರು.
ಇದನ್ನೂ ಓದಿ :ಸಿನಿಮೋತ್ಸವಗಳಲ್ಲಿ ಪ್ರಶಸ್ತಿ ಪಡೆದುಕೊಂಡ ‘ಪಿಂಕಿ ಎಲ್ಲಿ’ ಚಿತ್ರ ನಾಳೆ ಚಿತ್ರಮಂದಿರಗಳಲ್ಲಿ ಬಿಡುಗಡೆ
“ನಮ್ಮ ದೇಶದಲ್ಲಿ ಪ್ರಸ್ತುತ ಏನು ನಡೆಯುತ್ತಿದೆಯೋ ಅದನ್ನೇ ರಾಹುಲ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾತನಾಡುತ್ತಿದ್ದಾರೆ. ಮೋದಿ ಜೀ ಈ ಹಿಂದೆ ಮತ್ತು 2014ರ ನಂತರ ಏನು ಮಾಡಿದ್ದಾರೋ ಅದನ್ನೇ ರಾಹುಲ್ ಗಾಂಧಿ ಕೂಡ ಇಂದು ವಿದೇಶದಲ್ಲಿ ಮಾತನಾಡುತ್ತಿದ್ದಾರೆ” ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 11 =
Remember me
