ಅಹಮದಾಬಾದ್​:ಇಂದು ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದ ಸಾರ್ವಜನಿಕ ಸಭೆ ಒಂದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ‘ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಸದ್ದಾಂ ಹುಸೇನ್‌ ಥರ ಕಾಣುತ್ತಿದ್ದಾರೆ’ ಎಂದಿದ್ದಾರೆ. ಸದ್ಯ ಗುಜರಾತ್​ನಲ್ಲಿ ಚುನಾವಣಾ ತಯಾರಿ ನಡೆಯುತ್ತಿದ್ದು ಅಹಮದಾಬಾದ್​ನಲ್ಲಿ ಬಿಜೆಪಿಯ ಅಭ್ಯರ್ಥಿ ಪರವಾಗಿ ಹಿಮಂತ್​ ಬಿಸ್ವಾ ಪ್ರಚಾರಕ್ಕೆಂದು ತೆರಳಿದ್ದರು.
ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿರುವುದನ್ನು ಪ್ರಶ್ನಿಸಿದ ಹಿಮಂತ್​ ಬಿಸ್ವಾ ‘ಗುಜರಾತ್‌ನಲ್ಲಿ ಅವರು ಕಾಣಿಸುವುದೇ ಇಲ್ಲ. ಅವರು ಅತಿಥಿ ಉಪಸನ್ಯಾಸಕರಂತೆ ರಾಜ್ಯಕ್ಕೆ ಬರುತ್ತಾರೆ. ಅವರು ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಮಾಡಿಲ್ಲ. ಅವರು ಎಲ್ಲಿ ಚುನಾವಣೆಗಳೇ ಇಲ್ಲವೋ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಅವರು ಸೋಲಿನ ಭಯದಿಂದ ಈ ರೀತಿ ಮಾಡುತ್ತಿದ್ದಾರೆ’ ಎಂದು ಅಸ್ಸಾಂ ಸಿಎಂ ರಾಹುಲ್​ ಗಾಂಧಿಯ ಕಾಲೆಳೆದಿದ್ದಾರೆ.
ಈ ಹಿಂದೆ ಭಾರತ್ ಜೋಡೋ ಯಾತ್ರೆಗೆ ಸೇರಲು ಕಾಂಗ್ರೆಸ್ ಬಾಲಿವುಡ್ ನಟ-ನಟಿಯರಿಗೆ ಹಣ ನೀಡಿರಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಆರೋಪಿಸಿದ್ದರು. ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪೂಜಾ ಭಟ್ ಮತ್ತು ಅಮೋಲ್ ಪಾಲೇಕರ್​ರನ್ನು ಅವರು ಪರೋಕ್ಷವಾಗಿ ಉಲ್ಲೇಖಿಸಿದ್ದರು.
ಅಫ್ತಾಬ್​ ಶ್ರದ್ಧಾ ವಾಕರ್​ ಎನ್ನುವ ಯುವತಿಯನ್ನು ಕೊಲೆ ಮಾಡಿದ ಸುದ್ದಿಗೆ ಸಂಬಂಧಿಸಿದಂತೆ ನಿನ್ನೆ ಧನ್ಸುರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ, ಹಿಮಂತ್​ ಬಿಸ್ವಾ ‘ಲವ್ ಜಿಹಾದ್’ ಅನ್ನು ನಿಗ್ರಹಿಸಲು ಕಠಿಣ ಕಾನೂನು ಬೇಕು ಎಂದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
