ಗುವಾಹಟ:ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಇತ್ತ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಭಾರತ್​ ಜೋಡೋ ನ್ಯಾಯ್ ಯಾತ್ರೆ ನಡೆಸಲಾಗುತ್ತಿದ್ದು, ಅಸ್ಸಾಂನಲ್ಲಿ ಯಾತ್ರೆ ನಡೆಯುತ್ತಿದ್ದ ವೇಳೆ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆ ಕೂಗುತ್ತಿದ್ದಂತೆ ರಾಹುಲ್​ ಗಾಂಧಿ ತಾಳ್ಮೆ ಕಳೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
You dimwit. Rahul Gandhi didn’t lose his cool. But went to meet the people who were sloganeering — and the moment he went amidst them they ran awayWhat he did takes courage. Something that you and your master won’t ever understand. Now shut up and sit downhttps://t.co/XtTp3IBKau
ಇದನ್ನೂ ಓದಿ:ಸಾನಿಯಾ-ಶೋಯೆಬ್ ವಿಚ್ಛೇದನ ಪಡೆದಿದ್ದಾರೆ; ವದಂತಿಗಳಿಗೆ ತೆರೆ ಎಳೆದ ಕುಟುಂಬಸ್ಥರು
ವೈರಲ್​ ಆಗಿರುವ ವಿಡಿಯೋದಲ್ಲಿ ಬಸ್​ನಲ್ಲಿ ತೆರಳುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ನೋಡಿ ಕೆಲವರು ಜೈ ಶ್ರೀರಾಮ್​ ಎಂದು ಘೋಷಣೆಗಳನ್ನು ಕೂಗುತ್ತಾರೆ. ಇದರಿಂದ ಕೆರಳಿದ ರಾಹುಲ್​ ಕೂಡಲೇ ಬಸ್​ನಿಂದ ಕೆಳಗಿಳಿದು ಗುಂಪಿನತ್ತ ಕೋಪದಲ್ಲಿ ಧಾವಿಸುತ್ತಿರುವುದನ್ನು ನೋಡಬಹುದಾಗಿದೆ.
ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ನಾಯಕಿ ಸುಪ್ರಿಯಾ ಶ್ರೀನಾಟೆ, ರಾಹುಲ್ ಗಾಂಧಿ ತಾಳ್ಮೆ ಕಳೆದುಕೊಂಡಿಲ್ಲ. ಘೋಷಣೆ ಕೂಗುತ್ತಿದ್ದ ಜನರ ಬಳಿ ಮಾತನಾಡಲು ತೆರಳುತ್ತಿದ್ದಾಗ ಗುಂಪೊಂದು ಅವರನ್ನು ಹಿಂಬಾಲಿಸಿದೆ. ಅದನ್ನೇ ಬಿಜೆಪಿಯವರು ದೊಡ್ಡ ವಿಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕಿ ಸುಪ್ರಿಯಾ ಶ್ರೀನಾಟೆ ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
