ನವದೆಹಲಿ:ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಶುಕ್ರವಾರ ಫಾಕ್ಸ್​ಕಾನ್ ಛೇರ್ಮನ್ ಯಂಗ್ ಲಿಯು ಅವರನ್ನು ಭೇಟಿ ಮಾಡಿದರು.
ಇದನ್ನೂ ಓದಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಮೋದಿ ಸೇರಿದಂತೆ ಗಣ್ಯರಿಂದ ನಮನ
‘ಹೋನ್ ಹಾಯ್ ಟೆಕ್ನಾಲಜಿ ಗ್ರೂಪ್​ನ (ಫಾಕ್ಸ್​ಕಾನ್) ಛೇರ್ಮನ್ ಯಂಗ್ ಲಿಯು ಅವರನ್ನು ಭೇಟಿ ಮಾಡಿದ್ದು ಖುಷಿಯಾಯಿತು. ಭಾರತ ಮತ್ತು ಜಗತ್ತಿನ ಭವಿಷ್ಯದ ತಂತ್ರಜ್ಞಾನ ಬೆಳವಣಿಗೆ ಕುರಿತು ಚರ್ಚಿಸಿದೆವು ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್ ಹಾಕಿ ವಿವರಿಸಿದ್ದಾರೆ.
ಸರಿಯಾದ ಪ್ರೋತ್ಸಾಹದಿಂದ ಭಾರತ ತಂತ್ರಜ್ಞಾನ ಮಾರುಕಟ್ಟೆ ಮುಂದಿನ ದಿನಗಳಲ್ಲಿ ಪ್ರಮುಖ ಸ್ಥಾವರದಲ್ಲಿರಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಫಾಕ್ಸ್​ಕಾನ್ ಚೆನ್ನೈನ ಪೆರಂಬುದೂರಿನಲ್ಲಿ ಐಫೋನ್ ಅಸೆಂಬ್ಲಿಂಗ್ ಘಟಕ ಹೊಂದಿದೆ. ಕರ್ನಾಟಕ, ಆಂಧ್ರಪ್ರದೇಶದಲ್ಲೂ ತನ್ನ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದೆ. ಚೆನ್ನೈನಲ್ಲಿ ಅದು ಐಫೋನ್​ಗಳ ಅಸೆಂಬ್ಲಿಂಗ್ ಮಾಡುತ್ತದೆ. ಗೂಗಲ್​ನ ಪಿಕ್ಸೆಲ್ ಫೋನ್​ಗಳನ್ನು ತಯಾರಿಸಲೂ ಫಾಕ್ಸ್​ಕಾನ್ ಗುತ್ತಿಗೆ ಪಡೆಯುವ ಸಾಧ್ಯತೆ ಇದೆ.
It was a pleasure to meet Mr. Young Liu, Chairman of Foxconn, earlier today.
We had an engaging conversation on the future of technological innovation in India and the world.
With the right support, India’s tech industry can be positioned for a significant leap forward.pic.twitter.com/Vh8P3RGGk3
— Rahul Gandhi (@RahulGandhi)August 16, 2024

ತೈವಾನ್ ಮೂಲದ ಫಾಕ್ಸ್​ಕಾನ್ ಸಂಸ್ಥೆ ತನ್ನದೇ ಬ್ರ್ಯಾಂಡ್ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಹೊಂದಿಲ್ಲ. ಆ್ಯಪಲ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಕಂಪನಿಗಳ ಉತ್ಪನ್ನಗಳನ್ನು ಗುತ್ತಿಗೆ ಆಧಾರದಲ್ಲಿ ತಯಾರಿಸಿಕೊಡುತ್ತದೆ. ಈ ರೀತಿಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಯಲ್ಲಿ ವಿಶ್ವದ ಅತಿದೊಡ್ಡ ಕಂಪನಿ ಎನಿಸಿದೆ ಫಾಕ್ಸ್​ಕಾನ್. ಆಪಲ್​ನೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಫಾಕ್ಸ್ ಕಾನ್ ಭಾರತದಲ್ಲಿ 40 ಸಾವಿರ ಉದ್ಯೋಗ ಸೃಷ್ಟಿಸಲು ಮುಂದಾಗಿದೆ.
ಬಿಎಸ್​ ಯಡಿಯೂರಪ್ಪ ಆಪ್ತ, ಅರಸೀಕೆರೆ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 1 =
Remember me
