ರಾಂಚಿ:ನಿನ್ನೆಯಷ್ಟೇ (ಫೆ.17) ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ನ್ಯಾಯ ಯಾತ್ರೆ ಅಂತ್ಯಗೊಂಡಿದೆ. ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು. ಲೋಕಸಭೆ ಚುನಾವಣೆಗೂ ದಿನಗಣನೆ ಶುರುವಾಗಿದೆ. ಆದರೆ ಈಗ ಮತ್ತೆ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ:ಹಿಟ್​ಮ್ಯಾನ್​ ರೋಹಿತ್​ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಹಾರ್ದಿಕ್: ಮುಂಬೈ ಇಂಡಿಯನ್ಸ್ ಫ್ಯಾನ್ಸ್​ ಶಾಕ್​!
ರಾಹುಲ್​ಗೆ ಹಳೇ ಪ್ರಕರಣದ ತಲೆನೋವು ಹೆಚ್ಚಾಗಿದೆ. 2018ರ ಮಾನ ನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ವೇಳೆ ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಸಂಸದ-ಶಾಸಕರ ವಿಶೇಷ ನ್ಯಾಯಾಲಯ, ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಜಡ್ಜ್ ರಿಶಿ ಕುಮಾರ್ ರಾಹುಲ್ ಗಾಂಧಿಗೆ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ರಾಹುಲ್ ಗಾಂಧಿ ಮಾರ್ಚ್ 27 ಬುಧವಾರ ಖುದ್ದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಧೀಶ ರಿಷಿ ಕುಮಾರ್ ಅವರ ಪೀಠವು ಆದೇಶಿಸಿದೆ.
ಈ ಪ್ರಕರಣವು 2018 ರಲ್ಲಿ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಇದೀಗ ಬಿಜೆಪಿಯಲ್ಲಿ ಯಾರೇ ಕೊಲೆಗಾರರು ರಾಷ್ಟ್ರೀಯ ಬಿಜೆಪಿ ಪಕ್ಷದ ಅಧ್ಯಕ್ಷರಾಗಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿತ್ತು. ಆದರೆ ಜಾರ್ಖಂಡ್ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರತಾಪ್ ಕಟಿಯಾರ್ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೊಡಿದ್ದರು.ಜಾರ್ಖಂಡ್ ಚಾಯಬಸಾ ಶಾಸಕ-ಸಂಸದರ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು.
ಈಗಾಗಲೇ ರಾಹುಲ್ ಗಾಂಧಿಗೆ ಕೆಲ ಭಾರಿ ಕೋರ್ಟ್‌ಗೆ ಹಾಜರಾಗಲು ಸಮನ್ಸ್ ನೀಡಲಾಗಿತ್ತು. ಆದರೆ ರಾಹುಲ್ ಗಾಂಧಿ ಖುದ್ದ ಹಾಜರಾಗಿಲ್ಲ. ಈ ಬಾರಿ ರಾಹುಲ್ ಗಾಂಧಿ ಪರ ವಕೀಲರು ಹಾಜರಾಗಿ ಖುದ್ದು ಹಾಜರಾತಿಗೆ ವಿನಾಯಿತಿ ಕೋರಿದ್ದಾರೆ. ಲೋಕಸಭಾ ಚುನಾವಣೆ ಸೇರಿದಂತೆ ಹಲವು ಕಾರಣಗಳನ್ನು ರಾಹುಲ್ ಗಾಂಧಿ ಪರ ವಕೀಲರು ಮಂಡಿಸಿದ್ದರು. ಆದರೆ ಈ ವಾದ ಒಪ್ಪಿಕೊಳ್ಳದ ಕೋರ್ಟ್ ಖುದ್ದು ಹಾಜರಾತಿಗೆ ಸೂಚಿಸಿದ್ದಾರೆ.
ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
