ಲಂಡನ್‌:ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಬರೋ ಆಫ್ ಲ್ಯಾಂಬೆತ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಬ್ರಿಟಿಷ್ ಸಂಸತ್ತಿನ ಮುಂಭಾಗ ಭಾರತೀಯ ಪ್ರಜಾಪ್ರಭುತ್ವದ ಪ್ರವರ್ತಕರ ಪ್ರತಿಮೆ ಮತ್ತು ಭಾರತೀಯ ಶ್ರೇಷ್ಠ ಸಮಾಜ ಸುಧಾರಕರ ಪ್ರತಿಮೆಯನ್ನು ನೋಡುವುದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಬಸವೇಶ್ವರ ಪ್ರತಿಮೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.
ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಯನ್ನು 14 ನವೆಂಬರ್ 2015 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಯುನೈಟೆಡ್ ಕಿಂಗ್‌ಡಂನ ಪ್ರತಿಮೆಗಳ ಕಾಯಿದೆ, 1854ರ ಪ್ರಕಾರ ಸಂಸತ್ತಿನ ಸಮೀಪದಲ್ಲಿ ಬ್ರಿಟಿಷ್ ಕ್ಯಾಬಿನೆಟ್ ಅನುಮೋದಿಸಿದ ಮೊದಲ ಪರಿಕಲ್ಪನಾ ಪ್ರತಿಮೆಗಳಲ್ಲಿ ಬಸವಣ್ಣನವರ ಪ್ರತಿಮೆ ಒಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
