ನವದೆಹಲಿ:ಮುಂಬರುವ ಮಧ್ಯಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ 136 ಸೀಟುಗಳನ್ನು ಪಡೆದಂತೆಯೇ, ಮಧ್ಯಪ್ರದೇಶದ ಚುನಾವಣೆಯಲ್ಲಿ 150 ಸೀಟುಗಳನ್ನು ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ!
ಮಧ್ಯಪ್ರದೇಶ ಚುನಾವಣೆ ಸಲುವಾಗಿ ಇಂದು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ಕಾಂಗ್ರೆಸ್ ಈ ಬಾರಿ ನಡೆಯಲಿರುವ ಮಧ್ಯಪ್ರದೇಶದ ಚುನಾವಣೆಯಲ್ಲಿ 230 ಸೀಟುಗಳ ಪೈಕಿ 150 ಸೀಟುಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಿಎಂ-ಡಿಸಿಎಂ ರಾಜ್ಯವನ್ನು ಅಶಾಂತಿಯ ಬೀಡಾಗಿ ಪರಿವರ್ತಿಸುತ್ತಿದ್ದಾರೆ: ಕಿಡಿಕಾರಿದ ರಾಜ್ಯ ಬಿಜೆಪಿ
ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ರಾಹುಲ್, ದಿಗ್ವಿಜಯ್ ಸಿಂಗ್, ಕಮಲ್ ನಾಥ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಕೆಲವು ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
