ಮಿಜೋರಾಂ:ಪ್ರಧಾನಿ ನರೇಂದ್ರ ಮೋದಿ ಗಲಭೇ ಪೀಡಿತ ಮಣಿಪುರಕ್ಕಿಂತ ಇಸ್ರೇಲ್-ಹಮಾಸ್​ ನಡುವಿನ ಯುದ್ಧದ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ಧಾರೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ಐಜ್ವಾಲ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್​ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರವು ಇಸ್ರೇಲ್​ನಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಹೆಚ್ಚು ಆಸಕ್ತರಾಗಿದ್ದಾರೆ. ಆದರೆ, ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ. ಈ ವರ್ಷ ಜೂನ್​ನಲ್ಲಿ ನಾನು ಮನೀಪುರಕ್ಕೆ ಭೇಟಿ ನೀಡಿದ ವೇಳೆ ಅಲ್ಲಿ ನಡೆದಿದ್ದ ಘನಘೋರ ಕೃತ್ಯಗಳನ್ನು ನೋಡಿ ನನ್ನಿಂದ ನಂಬಲು ಸಾಧ್ಯವಿರಲಿಲ್ಲ.
ಇದನ್ನೂ ಓದಿ:ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 27 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
ಮಣಿಪುರವನ್ನು ಸಂಪೂರ್ಣವಾಗಿ ನಾಶ ಂಆಡಿರುವ ಬಿಜೆಪಿ ಅದರ ಪರಿಕಲ್ಪನೆಯನ್ನು ಹಾಳು ಮಾಡಿದೆ. ಮಣಿಪುರವನ್ನು ಎರಡು ರಾಜ್ಯಗಳನ್ನಾಗಿ ವಿಭಜಿಸಿ ದ್ವೇಷದ ಕಿಡಿ ಹೊತ್ತಿಸಿದೆ. ಮಹಿಳೆಯರು, ಮಕ್ಕಳಿಗೆ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ. ಆದರೆ, ಪ್ರಧಾನಿ ಮೋದಿ ಮಾತ್ರ ಈವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ.
ಮೇ ತಿಂಗಳಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ, ಮಣಿಪುರದಲ್ಲಿ ನಡೆದಿರುವುದು ಭಾರತದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ಗಾಂಧಿ ಹೇಳಿದರು. ಇದಕ್ಕೆ ವ್ಯತಿರಿಕ್ತವಾಗಿ, ಅವರು ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಈ ದೇಶದ ಪ್ರತಿಯೊಂದು ಧರ್ಮ, ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯವನ್ನು ರಕ್ಷಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ.
ಎರಡು ದಿನಗಳ ಮಿಜೋರಾಂ ಪ್ರವಾಸದಲ್ಲಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಡಿಸೆಂಬರ್​ 3ರಂದು ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
