ಜೈಪುರ:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮಾಡುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ವೈಖರಿಯನ್ನು ನೋಡಿದರೆ, ಕಾಂಗ್ರೆಸ್‌ ಪಕ್ಷವನ್ನು ಅವರೇ ಮುಂದುವರೆಸಬೇಕು ಎನ್ನುವುದು ಸಾಬೀತಾಗುತ್ತದೆ ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ರಾಹುಲ್‌ ಗಾಂಧಿಯವರು ಸಮರ್ಥ ನಾಯಕ, ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷರಾಗಿ ನಮ್ಮನ್ನು ಮುನ್ನಡೆಸಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಚೀನಾದಿಂದ ರಾಜೀವ್​ ಗಾಂಧಿ ಪ್ರತಿಷ್ಠಾನಕ್ಕೆ ಹರಿದು ಬಂತು ಲಕ್ಷಾಂತರ ರೂಪಾಯಿ ದೇಣಿಗೆ
ಚೀನಾ ಗಡಿ ವಿವಾದ ಹಾಗೂ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ವಿರುದ್ಧ ರಾಹುಲ್‌ ಅವರು ತೀಕ್ಷ್ಣ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮಾತನ್ನು ನೋಡಿದರೆ ಅವರೊಬ್ಬ ಸಮರ್ಥ ನಾಯಕ ಎನ್ನುವುದು ತಿಳಿದುಬರುತ್ತದೆ. ಆದ್ದರಿಂದ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರೇ ಸರಿಯಾದ ಅಭ್ಯರ್ಥಿಯಾಗಿದ್ದು, ಅವರೇ ನಮ್ಮ ನಾಯಕರಾಗಬೇಕು ಎಂದು ಪೈಲಟ್‌ ಹೇಳಿದ್ದಾರೆ.
ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ. ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ. ಆದರೆ ಈ ನಡುವೆಯೇ ರಾಹುಲ್‌ ಗಾಂಧಿಯವರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಸಮರ್ಥ ನಾಯಕನ ಲಕ್ಷಣವು ಅವರಲ್ಲಿ ಗೋಚರವಾಗುತ್ತಿದೆ ಎಂದು ಪೈಲಟ್ ಹೇಳಿದರು.(ಏಜೆನ್ಸೀಸ್‌)
ಕೀನ್ಯಾದಿಂದಲೂ ಚೀನಾಕ್ಕೆ ಮುಖಭಂಗ: ಬೃಹತ್‌ ರೈಲ್ವೆ ಯೋಜನೆಗೆ ಫುಲ್‌ಸ್ಟಾಪ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + thirteen =
Remember me
